ಬೆಂಗಳೂರು : ಕನ್ನಡ ಚಿತ್ರರಂಗದ ಅಚ್ಚುಮೆಚ್ಚಿನ ನಟ ಡಾಲಿ ಧನಂಜಯ್ ಅವರು ತಮ್ಮ ಬಹುಕಾಲದ ಗೆಳತಿ ಡಾ.ಧನ್ಯತಾ ಅವರ ಜೊತೆಗೆ ವಿವಾಹವಾಗಲಿದ್ದಾರೆ. ಫೆಬ್ರವರಿ 15ರಂದು ಮೈಸೂರಿನಲ್ಲಿ ನಡೆಯುವ ತಮ್ಮ ವಿವಾಹಕ್ಕೆ ಚಿತ್ರನಟ ಡಾಲಿ ಧನಂಜಯ ಅವರು ತಮ್ಮ ಭಾವಿ ಪತ್ನಿ ಅವರ ಸಮೇತ ಕಾವೇರಿ ನಿವಾಸಕ್ಕೆ ಆಗಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದರು.

ಡಾಲಿ ಧನಂಜಯ್ ಹಾಗೂ ಧನ್ಯತಾ ಮದುವೆ ಮೈಸೂರಿನ ಅರಮನೆ ಮುಂಭಾಗದ ವಸ್ತುಪ್ರದರ್ಶನ ಮೈದಾನದಲ್ಲಿ ಫೆಬ್ರವರಿ 16ರ ಭಾನುವಾರ ಬೆಳಿಗ್ಗೆ 8:30ಕ್ಕೆ ನಡೆಯಲಿದೆ. ಆರತಕ್ಷತೆ ಅದೇ ಮೈಸೂರಿನ ಅರಮನೆ ಮುಂಭಾಗದ ವಸ್ತುಪ್ರದರ್ಶನ ಮೈದಾನದಲ್ಲಿ ಫೆಬ್ರವರಿ 15ರ ಸಂಜೆ 6 ಗಂಟೆಗೆ ನಡೆಯಲಿದೆ.


