ರಾಜಕೀಯ

ನಾನು ಬೇಕು ಅಂದ್ರೆ ವಿನಯ್ ಗೆ ಒಂದೂ ಓಟು ಹಾಕಬೇಡಿ – ಸಿದ್ದರಾಮಯ್ಯ ಕರೆ

ದಾವಣಗೆರೆ : ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ನಿಮಗೆ ನಾನು ಬೇಕೋ-ವಿನಯ್ ಬೇಕೋ ತೀರ್ಮಾನ ಮಾಡಿ. ನಾನು ಬೇಕು ಅಂದ್ರೆ ವಿನಯ್ ಗೆ ಒಂದೂ ಓಟು ಹಾಕಬೇಡಿ. ಬಿಜೆಪಿ ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ. ಇಂಥಾ ಬಿಜೆಪಿಗೆ ವಿನಯ್ ಸಪೋರ್ಟ್ ಆಗುವಂತೆ ಮಾಡಿದ್ದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನನಗೆ ಮೋಸ ಮಾಡಿ ಹೋಗಿದ್ದ ಬೈರತಿ ಬಸವರಾಜು ಬಿಜೆಪಿಗೆ ಲಾಭ ಆಗಲಿ ಎಂದು ವಿನಯ್ ಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಬಿಜೆಪಿ ಹಿಂದುಳಿದವರನ್ನು ಬಳಸಿಕೊಂಡು ಬಿಸಾಡುತ್ತದೆ. ಇದಕ್ಕೆ ಕೆ.ಎಸ್.ಈಶ್ವರಪ್ಪ ಕೂಡ ಸ್ಪಷ್ಟ ಉದಾಹರಣೆ. ನನ್ನ ವಿರುದ್ಧ ರಕ್ತ ಕಾರುತ್ತಿದ್ದ ಈಶ್ವರಪ್ಪ ಅವರ ಮಗನಿಗೂ ಬಿಜೆಪಿ ಟಿಕೆಟ್ ಕೊಡಲಿಲ್ಲ. ಇದೇ ಬಿಜೆಪಿಯ ಜಾಯಮಾನ ಎಂದರು.

ದಾವಣಗೆರೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಅಭ್ಯರ್ಥಿ ಅಲ್ಲ. ಇಲ್ಲಿ ನಾನೇ ಅಭ್ಯರ್ಥಿ. ಕಾಂಗ್ರೆಸ್ ಗೆ ಹಾಕುವ ಒಂದೊಂದು ಮತಗಳೂ ನನಗೇ ಹಾಕಿದಂತೆ. ವಿಯನ್ ಗೆ ಹಾಕುವ ಒಂದೊಂದು ಮತವೂ ನನ್ನ ವಿರುದ್ಧ ಹಾಕಿದಂತೆ ಎಂದು ಸೂಚಿಸಿದರು.

Comments (0)

Your email address will not be published. Required fields are marked *

Back to top button