ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ!
Dr. Girish Bharadwaj, the master of suspension bridges and Padma Shri awardee, passes away!

ಮಂಗಳೂರು : ತೂಗುಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ನಿಧನರಾಗಿದ್ದಾರೆ. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಡಾ. ಗಿರೀಶ್ ಭಾರದ್ವಾಜ್ ಅವರು ಇಂದು ಬೆಳಗ್ಗೆ ಸುಳ್ಯದ ಕೆವಿಜೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ದೇಶದಾದ್ಯಂತ 140 ಕ್ಕೂ ಹೆಚ್ಚು ತೂಗು ಸೇತುವೆಗಳನ್ನು ನಿರ್ಮಿಸುವ ತೂಗು ಸೇತುವೆಗಳ ಸರದಾರ ಎಂದು ಹೆಸರು ಮಾಡಿದ್ದರು. 2017ರಲ್ಲಿ ದೇಶ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಇಂಜಿನಿಯರ್ ಪದವಿ ಪಡೆದ ಬಳಿಕ ಆಯಶ್ಯಿಲ್ಪ ಇಂಜಿನಿಯರಿಂಗ್ ವರ್ಕ್ಸ್ ಆರಂಭಿಸಿದ್ದ ಭಾರದ್ವಾಜ್ ಅವರು ಬಳಿಕ ತೂಗುಸೇತುವೆ ನಿರ್ಮಾಣ ಆರಂಭಿಸಿ ದೇಶ ವಿದೇಶಗಳಲ್ಲಿ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ಪ್ರಸಿದ್ಧರಾಗಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಇಂಜಿನಿಯರಿಂಗ್ ಪದವೀಧರರಾಗಿದ್ದ ಅವರು, ಬಹುದೊಡ್ಡ ಕಂಪನಿಗಳ ಆಕರ್ಷಕ ಉದ್ಯೋಗದ ಆಫರ್‌ಗಳನ್ನು ಬಿಟ್ಟು ಗ್ರಾಮೀಣ ಜನರ ಸಬಲೀಕರಣಕ್ಕೆ ಶ್ರಮಿಸಿದರು. ಕಡಿಮೆ ವೆಚ್ಚದಲ್ಲಿ ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸುವ ಮೂಲಕ ಗಮನ ಸೆಳೆದಿದ್ದರು. ಗ್ರಾಮೀಣ ಪ್ರದೇಶದಲ್ಲಿ ಇಂತಹ ನೂರಾರು ತೂಗು ಸೇತುವೆಗಳನ್ನು ನಿರ್ಮಿಸಿದ್ದರು. ಅವರ ಈ ಸೇವೆ ಗುರುತಿಸಿ ಕೇಂದ್ರ ಸರ್ಕಾರ ಅವರಿಗೆ 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿತ್ತು.
ಕರ್ನಾಟಕ, ಕೇರಳ, ಆಂಧ್ರಪ್ರದೇಶ ಮತ್ತು ಒಡಿಶಾ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ 300ಕ್ಕೂ ಹೆಚ್ಚು ತೂಗುಸೇತುವೆಗಳನ್ನು ಇವರು ನಿರ್ಮಿಸಿದ್ದಾರೆ. ಇದೀಗ ಡಾ. ಗಿರೀಶ್ ಭಾರದ್ವಾಜ್ ಅವರ ಅಗಲಿಕೆಗೆ ಸಿಎಂ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ.




