ಬೆಂಗಳೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ರಾಜ್ಯ ಸರ್ಕಾರ ವಿಷ್ಣುವರ್ಧನ್ ಹಾಗೂ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಘೋಷಿಸಿ, ಸಚಿವ ಸಂಪುಟ ಸಭೆಯಲ್ಲಿ ಮಹತ್ವ ನಿರ್ಧಾರ ತೆಗೆದುಕೊಂಡಿದ್ದು, ಇದು ಸಾಹಸ ಸಿಂಹ ವಿಷ್ಣು ಅಭಿಮಾನಿಗಳಿಗೆ ಸಂತಸದ ಸುದ್ದಿಯಾಗಿದೆ.
ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಅವರು ಮನವಿ ಮಾಡಿಕೊಂಡಿದ್ದರು. ಅಲ್ಲದೇ, ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಅವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಮನವಿ ಮಾಡಿದ್ದರು.