ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಭದ್ರಾ ಕಾಲುವೆಗೆ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ..
ಕಾರಿನಲ್ಲಿದ್ದ ಆರು ಜನರ ಪೈಕಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.. ಮಲ್ಲಿಕಾರ್ಜುನ(29) ಹಾಗೂ ಸಿದ್ದೇಶ್(38) ಮೃತರು. ದಾವಣೆಗೆರೆ ಮೂಲದ ಆರು ಜನ ಕಾರಿನಲ್ಲಿ ಮಂಗಳೂರು ಬಳಿಯ ಕೊರಗಜ್ಜ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಭದ್ರಾ ಕಾಲುವೆ ಕಾರು ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದರೆ, ನಾಲ್ವರು ಈಜಿ ದಡ ಸೇರಿದ್ದಾರೆ. ಚಾನಲ್‌ನಲ್ಲಿ ಬಿದ್ದ ಕಾರು ಹಾಗೂ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಸಂತೇಬೆನ್ನೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


