#Exclusive NewsTop Newsಜಿಲ್ಲೆಮನರಂಜನೆಸಿನಿಮಾಸುದ್ದಿ

ಡ್ರೋನ್ ಪ್ರತಾಪ್​ಗೆ ಜಾಮೀನು ಮಂಜೂರು….!

ಮಧುಗಿರಿ : ಮಧುಗಿರಿ ತಾಲೂಕಿನಲ್ಲಿ ಇತ್ತೀಚಿಗೆ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ನ್ಯಾಯಾಲಯದಿಂದ ಜಾಮೀನು ದೊರಕಿದೆ. ಜಾಮೀನು ಪ್ರಕ್ರಿಯೆ ಮುಗಿದ ಬಳಿಕ ಇಂದು ಅವರು ಜೈಲಿನಿಂದ ಹೊರಗೆ ಬರುವ ಸಾಧ್ಯತೆಯಿದೆ.

ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆದರೆ ಈಗ ಅವರಿಗೆ ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ಜಾಮೀನು ನೀಡಿದೆ.

Comments (0)

Your email address will not be published. Required fields are marked *

Back to top button