bengaluru
ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ – 3 ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಅರೆಸ್ಟ್!
Drug factory disguised as a poultry farm – 7 arrested for supplying to 3 states!

ಬೆಂಗಳೂರು : ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ಪ್ರಕರಣ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನ ರಾಜಗೋಳಿ ಗ್ರಾಮದಲ್ಲಿ ಕೋಳಿ ಫಾರ್ಮ್ ಹೆಸರಿನಲ್ಲಿ ನಡೆಯುತ್ತಿದ್ದ ಬೃಹತ್ ಡ್ರಗ್ಸ್ ಫ್ಯಾಕ್ಟರಿಯನ್ನು ಮಹಾರಾಷ್ಟ್ರದ ಆಂಟಿ-ನಾರ್ಕೋಟಿಕ್ಸ್ ಟಾಸ್ಕ್ ಫೋರ್ಸ್ ಮತ್ತು ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದಾರೆ.
ಆರೋಪಿಗಳು ಮಹಾರಾಷ್ಟ್ರ, ಗೋವಾ ಹಾಗೂ ಕರ್ನಾಟಕಕ್ಕೆ ಎಂಡಿಎಂಎ ಮಾದಕ ವಸ್ತು ಸರಬರಾಜು ಮಾಡುತ್ತಿದ್ದರು. ಫ್ಯಾಕ್ಟರಿ ಮೇಲೆ ದಾಳಿ ನಡೆಸಿರುವ ಮಹಾರಾಷ್ಟ್ರ ಮಾದಕ ವಸ್ತು ವಿರೋಧಿ ಟಾಸ್ಕ್ ಫೋರ್ಸ್ ಅಧಿಕಾರಿಗಳು ಬೆಳಗಾವಿಯ ಇಬ್ಬರು ಸೇರಿದಂತೆ ಏಳು ಜನರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ 1.13 ಕೋಟಿ ರೂ. ಮೌಲ್ಯದ 208 ಗ್ರಾಮ್ ಡ್ರಗ್ಸ್, ರಾಸಾಯನಿಕ ವಸ್ತು ಹಾಗೂ ಯಂತ್ರೋಪಕರಣಗಳನ್ನು ಜಪ್ತಿ ಮಾಡಿದ್ದಾರೆ.




