Thursday, February 12, 2026
27.3 C
Bengaluru
Google search engine
LIVE
ಮನೆಜಿಲ್ಲೆಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದವನ ಬ್ಯಾಗ್‌ನಲ್ಲಿತ್ತು ಕೋಟಿ ಮೌಲ್ಯದ ಡ್ರಗ್ಸ್

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದವನ ಬ್ಯಾಗ್‌ನಲ್ಲಿತ್ತು ಕೋಟಿ ಮೌಲ್ಯದ ಡ್ರಗ್ಸ್

ಬೆಂಗಳೂರು: ಕೆಂಪೆಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 3.39 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಫೋನಿಕ್‌ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕನ ಲಗೇಜ್ ಮೇಲೆ ಅನುಮಾನಗೊಂಡ ಅಧಿಕಾರಿಗಳು ತಪಾಸಣೆ ನಡೆಸಿದಾಗ ಈ ಬೃಹತ್ ಪ್ರಮಾಣದ ಮಾದಕ ವಸ್ತು ಪತ್ತೆಯಾಗಿದೆ. ಬ್ಯಾಗ್‌ನಲ್ಲಿ ಅತ್ಯಂತ ಜಾಗರೂಕತೆಯಿಂದ ಬಚ್ಚಿಟ್ಟಿದ್ದ ಒಟ್ಟು 9.7 ಕೆಜಿ ತೂಕದ ಹೈಡ್ರೋಫೋನಿಕ್ ಗಾಂಜಾವನ್ನು ನೋಡಿ ಅಧಿಕಾರಿಗಳೇ ದಂಗಾಗಿದ್ದಾರೆ.

ಸದ್ಯ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಪ್ರಯಾಣಿಕನನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ಜಾಲದ ಹಿಂದೆ ಅಂತರಾಷ್ಟ್ರೀಯ ಮಟ್ಟದ ದೊಡ್ಡ ಡ್ರಗ್ ಮಾಫಿಯಾ ಇರುವ ಸಂಶಯವಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯು ಈ ಗಾಂಜಾವನ್ನು ಯಾರಿಗೆ ತಲುಪಿಸಲು ಬೆಂಗಳೂರಿಗೆ ಬಂದಿದ್ದ ಎಂಬ ಬಗ್ಗೆ ಕಸ್ಟಮ್ಸ್ ಮತ್ತು ನಾರ್ಕೋಟಿಕ್ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳ ಸಾಗಾಟ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ ಫೆಬ್ರವರಿ 7 ರಂದು ಸಹ ಅಧಿಕಾರಿಗಳು ಎರಡು ಪ್ರತ್ಯೇಕ ಕಾರ್ಯಾಚರಣೆಗಳನ್ನು ನಡೆಸಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದರು. ಒಂದು ವಾರದ ಅಂತರದಲ್ಲೇ ಬರೋಬ್ಬರಿ 6 ಕೋಟಿಗೂ ಅಧಿಕ ಮೌಲ್ಯದ ಗಾಂಜಾ ಸಿಕ್ಕಿಬಿದ್ದಿರುವುದು ಭದ್ರತಾ ಸಂಸ್ಥೆಗಳನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments