Thursday, November 20, 2025
26.6 C
Bengaluru
Google search engine
LIVE
ಮನೆಫ್ರೀಡಂ ಟಿವಿ ವಿಶೇಷಅನರ್ಹ BPL ಕಾರ್ಡ್​​ಗಳ ಬಗ್ಗೆ ಶಾಕಿಂಗ್​ ಅಂಶ ಬಿಚ್ಚಿಟ್ಟ ಇ-ಗವರ್ನೆನ್ಸ್...!

ಅನರ್ಹ BPL ಕಾರ್ಡ್​​ಗಳ ಬಗ್ಗೆ ಶಾಕಿಂಗ್​ ಅಂಶ ಬಿಚ್ಚಿಟ್ಟ ಇ-ಗವರ್ನೆನ್ಸ್…!

ಅನರ್ಹ ಬಿಪಿಎಲ್ ಕಾರ್ಡ್​ದಾರರ ಮೇಲೆ ರಾಜ್ಯ ಸರ್ಕಾರ  ಮೆಗಾ ಆಪರೇಷನ್​ ನಡೆಯುತ್ತಿದೆ. ಅನರ್ಹ ಬಿಪಿಎಲ್ ಕಾರ್ಡ್​ ಫಲಾನುಭವಿಗಳೇ ಹೆಚ್ಚು ಇರುವ ಶಾಕಿಂಗ್ ಮಾಹಿತಿ ಬಯಲಾಗಿದೆ. ರಾಜ್ಯದಲ್ಲಿ ಬರೋಬ್ಬರಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್​ದಾರರು ಇದ್ದಾರೆ ಎಂಬ ಸ್ಫೋಟಕ ಸಂಗತಿ ಬಯಲಾಗಿದೆ. ಆಗಸ್ಟ್ 2024ರಲ್ಲಿ ಆಹಾರ ಇಲಾಖೆಗೆ ಇ ಗವರ್ನೆನ್ಸ್​ ಇಲಾಖೆ ಮಾಹಿತಿ ಕೊಟ್ಟಿದೆ. ಇದೇ ಮಾಹಿತಿ ಇಟ್ಟುಕೊಂಡೇ 22 ಲಕ್ಷ ಅನರ್ಹ ಬಿಪಿಎಲ್​ ಕಾರ್ಡ್​​ಗಳ ರದ್ದಾಗಲಿದೆಯೇ ಎಂಬ ಅನುಮಾನ ಈಗ ಮೂಡಿದೆ. ಕಲಬುರಗಿ ಜಿಲ್ಲೆಯಲ್ಲೇ ಅತಿ ಹೆಚ್ಚು ಅನರ್ಹರಿಗೆ ಬಿಪಿಎಲ್​ ಕಾರ್ಡ್​ ಕೊಟ್ಟಿರುವ ಮಾಹಿತಿ ಸಿಕ್ಕಿದೆ. ಕಲಬುರಗಿಯಲ್ಲಿ 78,058 ಮಂದಿ ಅನರ್ಹರಿಗೆ ಬಿಪಿಎಲ್ ಕಾರ್ಡ್​ ನೀಡಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 65,563 ಅನರ್ಹರ ಬಳಿ ಬಿಪಿಎಲ್ ಕಾರ್ಡ್​ ಇದೆ. ಬೆಂಗಳೂರು ಪೂರ್ವದಲ್ಲಿ 9,129 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರು ಉತ್ತರದಲ್ಲಿ 17,382 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರು ದಕ್ಷಿಣದಲ್ಲಿ 11,447 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಇನ್ನು,  ಬಾಗಲಕೋಟೆಯಲ್ಲಿ ಬಿಪಿಎಲ್​ ಕಾರ್ಡ್​ ರದ್ದಿನಿಂದಾಗಿ ಪಡಿತರ ಸಿಗದೇ ವೃದ್ಧೆಯೊಬ್ಬರು ಕಣ್ಣೀರು ಹಾಕಿದ್ದಾರೆ.ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನ ವೃಷಭಾವತಿ ನಗರದಲ್ಲಿ ಹಲವು ಬಿಪಿಎಲ್ ಕಾರ್ಡ್ ಗಳು ರದ್ದುಗೊಂಡಿವೆ. ಮನೆಗೆಲಸ, ಹಪ್ಪಳ ಮಾರಾಟ ಮಾಡಿ ಬದುಕು ಸಾಗಿಸುತ್ತಿದ್ದ ಜನರು ಕಾರ್ಡ್ ರದ್ದತಿಯಿಂದ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು ಅಳಲು ತೋಡಿಕೊಂಡಿದ್ದಾರೆ.ಇನ್ನು ಬಿಪಿಎಲ್​ ಕಾರ್ಡ್​ ಪರಿಷ್ಕರಣೆಯನ್ನೇ ಅಸ್ತ್ರ ಮಾಡ್ಕೊಂಡಿರುವ ಬಿಜೆಪಿ, ಸತ್ಯಶೋಧನೆ ನಡೆಸುತ್ತಿದೆ. ಬಿಪಿಎಲ್ ಕಾರ್ಡ್​ ರದ್ದಾದವರ ಮನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್​ ಭೇಟಿ ನೀಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಜೈ ಮಾರುತಿ ನಗರದಲ್ಲಿ ಬಿಪಿಎಲ್ ಕಾರ್ಡ್ ರದ್ದಾದವರ ನಿವಾಶಕ್ಕೆ ಭೇಟಿ ನೀಡಿದ್ದಾರೆ. ಆರ್. ಅಶೋಕ್​ಗೆ ಅಶ್ವತ್ಥ್​ ನಾರಾಯಣ, ಕೆ.ಗೋಪಾಲಯ್ಯ ಸಾಥ್ ನೀಡಿದ್ದಾರೆ.ಏತನ್ಮಧ್ಯೆ, ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಭರವಸೆ ನೀಡಿದ್ದಾರೆ. ಅರ್ಹ ಬಿಪಿಎಲ್ ಕಾರ್ಡ್​ದಾರರು ಆತಂಕ ಆತಂಕಕ್ಕೊಳಗಾಗುವುದು ಬೇಡ ಎಂದಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments