ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮುಡಾ ಹಗರಣಕ್ಕೆ ಸಂಬಂಧಿಸಿಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್ ಜಾರಿ ಮಾಡಿದೆ. ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.
ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಪೀಠಕ್ಕೆ ಮನವಿ ಮಾಡಿದರು. ಸೋಮವಾರ ಕಲಾಪದ ಕೊನೆಗೆ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ಒಪ್ಪಿಗೆ ಸೂಚಿಸಿದರು.