ಕೋಲಾರ: ಕೋಲಾರದಲ್ಲಿ ಶಾಸಕರ ಮನೆ ಹಾಗೂ ಕಛೇರಿ ಮೇಲೆ ಇಡಿ ರೇಡ್ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಮನೆ ಮೇಲೆ ದಾಳಿ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ನಂಜೇಗೌಡ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಕೊಮ್ಮನಹಳ್ಳಿಯ ಮನೆ ಕೋಲಾರ ತಾಲೂಕು ಹುತ್ತೂರು ಬಳಿಯ ಕಛೇರಿ ಮೇಲೂ ರೇಡ್ ಶಾಸಕರ ಒಡೆತನದ ಕೊಮ್ಮನಹಳ್ಳಿ ಕ್ರಷರ್ ಮೇಲೂ ಇಡಿ ದಾಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್ ಕಛೇರಿಯಲ್ಲಿ ದಾಖಲೆ ಪರಿಶೀಲನೆ ಕೋಚಿಮುಲ್ ನೇಮಕಾತಿ ವಿಚಾರದಲ್ಲಿ ಅವ್ಯವಹಾರದ ಆರೋಪವಿತ್ತು ನೇಮಕಾತಿಯಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದ ಆರೋಪ.
ಕೋಲಾರ: ಕೊಚಿಮುಲ್ (ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ) ಡೈರಿ ಕಚೇರಿ ಹಾಗೂ ಅದರ ಅಧ್ಯಕ್ಷ, ಹಾಲಿ ಕಾಂಗ್ರೆಸ್ ಶಾಸಕರ ಮನೆಗಳ ಮೇಲೆ ಮೇಲೆ ಇಂದು ಮುಂಜಾನೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 25 ಜನ ಇಡಿ ಸಿಬ್ಬಂದಿಗಳ ತಂಡದಿಂದ ದಾಳಿ ನಡೆದಿದೆ. ಇಂದು ಬೆಳಗಿನ ಜಾವ ಮೂರು ಗಂಟೆಗೆ ಕೊಚಿಮುಲ್ ಡೈರಿ ಮೇಲೆ ಇಡಿ ತಂಡ ದಾಳಿಯಿಟ್ಟು, ಡೈರಿ ಕಚೇರಿಯ ದಾಖಲಾತಿಗಳನ್ನು ಪರಿಶೀಲನೆ ಮಾಡುತ್ತಿದೆ. ಇತ್ತೀಚಿಗೆ ಕೊಚಿಮುಲ್ ನೇಮಕಾತಿ ಹಗರಣ ನಡೆದಿತ್ತು.
ಈ ನೇಮಕಾತಿ ಪ್ರಕ್ರಿಯೆಯಲ್ಲಿ ಸಂಬಂಧಪಟ್ಟವರು ಒಂದು ಸೀಟಿಗೆ 40 ರಿಂದ 50 ಲಕ್ಷ ರೂಪಾಯಿ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಆ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ. ಡೈರಿಯ ಒಳಗೆ ಯಾರನ್ನೂ ಬಿಡದಂತೆ ಎಲ್ಲಾ ಗೇಟ್‌ಗಳನ್ನು ಲಾಕ್ ಮಾಡಲಾಗಿದೆ. ಡೈರಿಯಲ್ಲಿರುವ ಮಹತ್ವದ ದಾಖಲೆಗಳನ್ನು ತಂಡ ಪರಿಶೀಲನೆ ನಡೆಸುತ್ತಿದೆ. ಡೈರಿ ಸುತ್ತಮುತ್ತ ಬಿಗಿ ಭದ್ರತೆಯನ್ನು ಕಲ್ಪಿಸಲಾಗಿದೆ. ಕೋಚುಮುಲ್ ಡೈರಿ ಅಧ್ಯಕ್ಷ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಮನೆ ಮೇಲೂ ಇಡಿ ದಾಳಿ ನಡೆಸಿದೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಹೋಬಳಿ ಕೋಮ್ಮನಹಳ್ಳಿ ಗ್ರಾಮದಲ್ಲಿ ಶಾಸಕರ ನಿವಾಸವಿದೆ. ಬೆಳಗ್ಗೆ 6 ಗಂಟೆಯಿಂದ ಇಡಿ ಅಧಿಕಾರಿಗಳ ತಂಡದಿಂದ ಮನೆಯಲ್ಲಿನ ಮಹತ್ವ ದಾಖಲೆ ಪರಿಶೀಲನೆ ನಡೆಯುತ್ತಿದೆ. ಮನೆಯ ಸುತ್ತಲೂ ಬಿಗಿ ಭದ್ರತೆ ಕಲ್ಪಿಸಲಾಗಿದೆ.