ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ಮತ್ತು ಶ್ರೀಲಂಕಾ ಕರಾವಳಿ ಭಾಗದಲ್ಲಿ ದಿತ್ವಾ ಚಂಡಮಾರುತ ಎಫೆಕ್ಟ್‌ನಿಂದ ಬೆಂಗಳೂರಿನಲ್ಲಿ ಮಳೆ, ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಬೆಳ್ಳಗ್ಗೆಯೇ ತುಂತುರು ಮಳೆಯಾಗುತ್ತಿದ್ದು, ಕರ್ನಾಟಕದ ಹಲವು ಜಿಲ್ಲೆಗಳಿಗೆ ಮಳೆಯ ಅಲರ್ಟ್ ಘೋಷಣೆ ಮಾಡಲಾಗಿದೆ.. ತಮಿಳುನಾಡು ಕರಾವಳಿಗೆ ಅಪ್ಪಳಿಸಿದ ದಿತ್ವಾ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲೂ ಮಳೆಯಾಗ್ತಿದೆ..
ಬೆಂಗಳೂರು ಸೇರಿ ಅನೇಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯ ಸಾಧ್ಯತೆ ಇದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸೂಚನೆ ಹವಾಮಾನ ಇಲಾಖೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಒಣ ಹವೆಗೆ ಮುಂದುವರೆಯುವ ಸಾಧ್ಯತೆ ಇದೆ.


