Tuesday, November 18, 2025
21.9 C
Bengaluru
Google search engine
LIVE
ಮನೆರಾಜಕೀಯಶಾಸಕ ಕೆ.ವೈ ನಂಜೇಗೌಡ ಆಯ್ಕೆಗೆ ತಡೆ: ಮರುಮತ ಎಣಿಕೆಗೆ ಸುಪ್ರೀಂ ಕೋರ್ಟ್ ಸೂಚನೆ

ಶಾಸಕ ಕೆ.ವೈ ನಂಜೇಗೌಡ ಆಯ್ಕೆಗೆ ತಡೆ: ಮರುಮತ ಎಣಿಕೆಗೆ ಸುಪ್ರೀಂ ಕೋರ್ಟ್ ಸೂಚನೆ

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಶಾಸಕ ಕೆವೈ ನಂಜೇಗೌಡ ಅವರ ಶಾಸಕ ಸ್ಥಾನ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್​​ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಮರು ಮತ ಎಣಿಕೆಗೆ ಸೂಚನೆ ನೀಡಿದೆ.

ಮತಗಳ ಮರುಎಣಿಕೆ ನಡೆಸಿ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಇದರೊಂದಿಗೆ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡಗೆ ತುಸು ರಿಲೀಫ್ ದೊರೆತಂತಾಗಿದೆ.

ಹೈಕೋರ್ಟ್‌ ಶಾಸಕ ಸ್ಥಾನ ರದ್ದು ಮಾಡಿದ್ದನ್ನು ಪ್ರಶ್ನೆ ಮಾಡಿ ಕೆವೈ ನಂಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ನ್ಯಾ. ಸೂರ್ಯಕಾಂತ್‌ ಹಾಗೂ ನ್ಯಾ. ಜೊಯಮಲ್ಯ ಬಾಗ್ಚಿ ಅವರ ಪೀಠದಿಂದ ವಿಚಾರಣೆ ನಡೆಸಲಾಯಿತು. ಈ ವೇಳೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.

2023 ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದ ಮತ ಎಣಿಕೆಯಲ್ಲಿ ಅಕ್ರಮ ಪ್ರಕರಣದಲ್ಲಿ ಸೆಪ್ಟೆಂಬರ್ 16 ರಂದು ಕರ್ನಾಟಕ ಹೈಕೋರ್ಟ್‌ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಕೆವೈ ನಂಜೇಗೌಡ ಆಯ್ಕೆಯನ್ನು ರದ್ದುಪಡಿಸಿತ್ತು. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಂಜೇಗೌಡರಿಗೆ ಒಂದು ತಿಂಗಳ ಅವಕಾಶ ನೀಡಿತ್ತು. ಹೀಗಾಗಿ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಸುಪ್ರೀಂ ಕೋರ್ಟ್ ಆದೇಶ್ ಬಗ್ಗೆ ನಂಜೇಗೌಡ ಸಂತಸ ವ್ಯಕ್ತಪಡಿಸಿದ್ದು, ನ್ಯಾಯ ಸಿಕ್ಕಿದೆ. ಸಂತೋಷ ಆಗುತ್ತಿದೆ ಎಂದಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್​​ನಲ್ಲಿ‌ ಕೇಸ್ ಹಾಕಿಕೊಂಡಾಗ ಬಿಜೆಪಿ ಅಭ್ಯರ್ಥಿಗೆ ಹೇಳಿದ್ದೆ. ಮರು ಮತ ಎಣಿಕೆಗೆ ನಾನು ಬೇಡ ಎನ್ನಲ್ಲ ಎಂದಿದ್ದೆ. ಮರುಮತ ಎಣಿಕೆ ಜತೆಗೆ ಅಸಿಂಧು ಎಂದು ಆದೇಶವಾಗಿತ್ತು. ಹಾಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದೆ. ಅಸಿಂಧು ಎಂಬ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ. ಮರು ಮತ ಎಣಿಕೆ ಆದರೂ ನಾನು ಗೆಲ್ಲುತ್ತೇನೆ ಎಂದು ಹೇಳಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments