ಬೆಂಗಳೂರು: ಚಕ್ರವರ್ತಿ ಸೂಲಿಬೆಲೆಯವರ ತಂದೆ ದೇವದಾಸ್ ಸುಬ್ರಾಯ್ ಶೇಟ್ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಸುತ್ತಿದ್ದ ಚಕ್ರವರ್ತಿ ಸೂಲಿಬೆಲೆ ತಂದೆ ಸಾವನ್ನಪ್ಪಿದ್ದಾರೆ.
ತಂದೆ ನಿಧನದ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಅಪ್ಪ ಇಂದು ಬೆಳಿಗ್ಗೆಯಷ್ಟೇ ಯಾತ್ರೆ ಮುಗಿಸಿ ಅಗಲಿದರು.ಬದುಕಿನ ಪಯಣದಲ್ಲಿ ಯಾರೂ ಶಾಶ್ವತವಾಗಿ ಜೊತೆಗಿರಲಾರರು. ಆದರೆ ಕೆಲವರ ವಿಯೋಗ ಅನಿರೀಕ್ಷಿತ ಮತ್ತು ದುಃಖಮಯವಾಗಿರುತ್ತದೆ. ಶ್ವಾಸಕೋಶದ ಸಮಸ್ಯೆ ಅವರನ್ನು ಈ ಹಂತಕ್ಕೊಯ್ಯುವುದೆಂದು ಎಣಿಸಿರಲಿಲ್ಲ.
ದೇವದಾಸ್ ಸುಬ್ರಾಯ್ ಶೇಟ್ ಅವರು ಸೂಲಿಬೆಲಿಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆಸಲ್ಲಿಸಿದವರು.