Thursday, November 20, 2025
19.9 C
Bengaluru
Google search engine
LIVE
ಮನೆ#Exclusive NewsTop Newsತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು..!

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು..!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ ರೂ. ಒದಗಿಸಿದ್ದಾರೆ.
ಗರ್ಭಿಣಿಯರಲ್ಲಿ ಮತ್ತು ಪ್ರಸೂತಿ ವೇಳೆಯಲ್ಲಿನ ತೀವ್ರತರಹದ ರಕ್ತಸ್ರಾವ ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು ಅವಶ್ಯವಿರುವ ಉಪಕರಣಗಳನ್ನು ನೀಡಲಾಗುವುದು. ನೂತನ ಡಿಜಿಟಲ್ ತಂತ್ರಜ್ಞಾನದ ಮೂಲಕ ಹೆರಿಗೆ ಸೇವೆಗಳನ್ನು ಬಲಪಡಿಸಲಾಗುವುದು. ಗರ್ಭಿಣಿಯರಲ್ಲಿ ರಕ್ತಹೀನತೆ ತಡೆಗಟ್ಟಲು ಹಿಂದುಳಿದ ಜಿಲ್ಲೆಗಳಲ್ಲಿ ಪೌಷ್ಟಿಕಾಂಶ ಕಿಟ್‌ಗಳು, ಪ್ರೋತ್ಸಾಹ ಧನ ಹಾಗೂ ತಾಯಂದಿರಿಗೆ ವಾತ್ಸಲ್ಯ ಕಿಟ್‌ಗಳನ್ನು ವಿತರಣೆ ಮಾಡಲಾಗುವುದು ಎಂದಿದ್ದಾರೆ.
ಹುದ್ದೆಗಳನ್ನು ಪುನರ್ ಹಂಚಿಕೆ ಮಾಡುವ ಮೂಲಕ ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲಿ MCH ತಜ್ಞರನ್ನು ನಿಯೋಜಿಸಲಾಗುವುದು. ರಾಜ್ಯದಲ್ಲಿ ಸಂಭವಿಸುವ ತಾಯಿ ಮರಣವನ್ನು ರಾಜ್ಯ ತಾಂತ್ರಿಕ ತಜ್ಞರ ಸಮಿತಿಯಿಂದ ಆಡಿಟ್‌ ಮಾಡಿಸಿ ಶಿಫಾರಸ್ಸುಗಳನ್ನು ರಾಜ್ಯ ಅಧಿಕಾರಯುಕ್ತ ಸಮಿತಿ ಮುಂದೆ ಮಂಡಿಸಲಾಗುವುದು. ಸಮಿತಿಯ ನಿರ್ದೇಶನದಂತೆ ತಾಯಿ ಮರಣ ತಡೆಗಟ್ಟುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments