Thursday, May 1, 2025
28.8 C
Bengaluru
LIVE
ಮನೆ#Exclusive NewsTop Newsಶ್ರೀನಗರದಲ್ಲಿ ಸೇನಾಪಡೆ-ಉಗ್ರರ ನಡುವೆ ಗುಂಡಿನ ಚಕಮಕಿ

ಶ್ರೀನಗರದಲ್ಲಿ ಸೇನಾಪಡೆ-ಉಗ್ರರ ನಡುವೆ ಗುಂಡಿನ ಚಕಮಕಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಖನ್ಯಾರ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಶನಿವಾರ ಬೆಳಗ್ಗೆ ಕಾಶ್ಮೀರದ ಖನ್ಯಾರ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯ ವೇಳೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.

ಒಂದು ದಿನದ ಹಿಂದೆಯಷ್ಟೇ ವಲಸೆ ಕಾರ್ಮಿಕರ ಮೇಲೆ ನಡೆದ ಗುಂಡಿನ ದಾಳಿಯ ಬಳಿಕ ಉಗ್ರರು ಖನ್ಯಾರ್ ಪ್ರದೇಶದಲ್ಲಿ ಇರುವುದಾಗಿ ಭದ್ರತಾ ಪಡೆಗಳಿಗೆ ಖಚಿತ ಮಾಹಿತಿ ಲಭಿಸಿತ್ತು. ಇದರಿಂದ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಈ ವೇಳೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದೆ.

ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಮಗಮ್ ಪ್ರದೇಶದಲ್ಲಿ ಇಬ್ಬರು ವಲಸೆ ಕಾರ್ಮಿಕರ ಮೇಲೆ ಭಯೋತ್ಪಾದಕರು ಶುಕ್ರವಾರ ಗುಂಡಿನ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಇಬ್ಬರು ವಲಸೆ ಕಾರ್ಮಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿಯೂ ಭಯೋತ್ಪಾದಕರ ಚಲನವಲನ ಕುರಿತು ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ. ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿಕುಳಿತಿದ್ದ ಉಗ್ರರು ಅರಣ್ಯ ಪ್ರದೇಶದೊಳಗೆ ನುಗ್ಗಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments