‘ಒಂದು ಸರಳ ಪ್ರೇಮ ಕತೆ’ ಸಿನಿಮಾದ ಮೂಲಕ ಗಮನ ಸೆಳೆದಿದ್ದ ನಟ ವಿನಯ್ ರಾಜ್ಕುಮಾರ್, ಇದೀಗ ‘ಪೆಪೆ’ ಸಿನಿಮಾ ಮೂಲಕ ರಗಡ್ ಅವತಾರದಲ್ಲಿ ಬರುತ್ತಿದ್ದಾರೆ. ‘ಪೆಪೆ’ ಸಿನಿಮಾ ಸೆನ್ಸಾರ್ ಪಾಸ್ ಆಗಿದ್ದು ಸಿನಿಮಾ ‘ಎ’ ರೇಟಿಂಗ್ ದೊರೆತಿದೆ. ಪಕ್ಕಾ ವೈಯಲೆಂಟ್ ಸಿನಿಮಾ ಇದಾಗಿದೆ.
ವಿನಯ್ ರಾಜ್ಕುಮಾರ್ ನಟನೆಯ ‘ಒಂದು ಸರಳ ಪ್ರೇಮ ಕತೆ’ ಸಿನಿಮಾ ಕೆಲವು ತಿಂಗಳ ಹಿಂದಷ್ಟೆ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಸಿಂಪಲ್ ಸುನಿ ನಿರ್ದೇಶನ ಮಾಡಿದ್ದ ಈ ಸಿನಿಮಾಕ್ಕೆ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ದೊರಕಿತ್ತು. ಇದೇ ಖುಷಿಯಲ್ಲಿ ವಿನಯ್ ರಾಜ್ಕುಮಾರ್ ನಟನೆಯ ಹೊಸ ಸಿನಿಮಾ ಒಂದು ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾದ ಸೆನ್ಸಾರ್ ಮುಗಿದಿದ್ದು, ಸಿನಿಮಾಕ್ಕೆ ‘ಎ’ ಸರ್ಟಿಫಿಕೇಶನ್ ದೊರೆತಿದೆ. ಇದಕ್ಕೆ ಕಾರಣ ಸಿನಿಮಾದಲ್ಲಿರುವ ಕಚ್ಚಾತನ ಎನ್ನಲಾಗುತ್ತಿದೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com