Wednesday, January 28, 2026
17 C
Bengaluru
Google search engine
LIVE
ಮನೆ#Exclusive NewsTop Newsದೀಪಾವಳಿಗೆ ರಾಜ್ಯದಲ್ಲೂ ಪಟಾಕಿ ಮಾರಾಟ, ಬಳಕೆ ನಿಷೇಧ:ಈಶ್ವರ ಖಂಡ್ರೆ

ದೀಪಾವಳಿಗೆ ರಾಜ್ಯದಲ್ಲೂ ಪಟಾಕಿ ಮಾರಾಟ, ಬಳಕೆ ನಿಷೇಧ:ಈಶ್ವರ ಖಂಡ್ರೆ

ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ. ಇದರ ಜತೆಗೆ ಹಸಿರು ಪಟಾಕಿ ಹೊರತುಪಡಿಸಿ ಎಲ್ಲ ರೀತಿಯ ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚಿಸಿದೆ.

ಈ ಕುರಿತು ಶನಿವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವ ಈಶ್ವರ ಖಂಡ್ರೆ, ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ, ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಮನವಿ ಮಾಡಿದ್ದಾರೆ.

ಹಸಿರು ಪಟಾಕಿ ಮಾತ್ರವೇ ಬಳಸಿ

ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡುತ್ತೇವೆ. ಹಲವರು ಗಾಯಗೊಳ್ಳುತ್ತಾರೆ. ಹೀಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ. ಪಟಾಕಿ ಸಿಡಿಸಲೇಬೇಕು ಎಂದಾದರೆ ಪರಿಸರಕ್ಕೆ ಹಾನಿ ಉಂಟು ಮಾಡದ ಹಸಿರು ಪಟಾಕಿಯನ್ನು ಮಾತ್ರವೇ ಸಿಡಿಸಿ ಎಂದು ತಿಳಿಸಿದ್ದಾರೆ.

125 ಡೆಸಿಬಲ್‌ಗಿಂತ ಕಡಿಮೆ ಶಬ್ದದ ಪಟಾಕಿಗೆ ಅವಕಾಶ

ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮತ್ತು ಸುಪ್ರೀಂಕೋರ್ಟ್ ತನ್ನ ತೀರ್ಪುಗಳಲ್ಲಿ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಹಚ್ಚಲು ಅವಕಾಶ ಕಲ್ಪಿಸಿದೆ. ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಬೇಕು. ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಜಾಗೃತಿ ಮೂಡಿಸಲು ಮನವಿ

ಸಂಘ ಸಂಸ್ಥೆಗಳು, ಶಿಕ್ಷಕರು, ಬೋಧಕರು, ಉಪನ್ಯಾಸಕರು, ಪರಿಸರ ಪ್ರೇಮಿಗಳು, ಜನಪ್ರತಿನಿಧಿಗಳು ಜನರಲ್ಲಿ ಅದರಲ್ಲೂ ಮಕ್ಕಳಲ್ಲಿ ಪಟಾಕಿಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಸಚಿವರು ಮನವಿ ಮಾಡಿದ್ದಾರೆ. ಹೆಚ್ಚು ಶಬ್ದ ಮತ್ತು ದಟ್ಟ ಹೊಗೆ ಹೊರಹೊಮ್ಮುವ ರಾಸಾಯನಿಕ ಮತ್ತು ಭಾರ ಲೋಹಯುಕ್ತ ಪಟಾಕಿಗಳಿಂದ ಉಸಿರಾಟಕ್ಕೂ ತೊಂದರೆ ಆಗುತ್ತದೆ. ಭಾರೀ ಶಬ್ದ ಮಾಡುವ ಪಟಾಕಿಗಳಿಂದ ಪಶು, ಪಕ್ಷಿಗಳಿಗೂ ಕಿರಿಕಿರಿ ಉಂಟಾಗುತ್ತದೆ. ಹೀಗಾಗಿ ಪಟಾಕಿಗಳನ್ನು ತ್ಯಜಿಸೋಣ. ದೀಪದಿಂದ ದೀಪ ಹಚ್ಚಿ ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ ಎಂದು ಈಶ್ವರ ಖಂಡ್ರೆ ಕರೆ ನೀಡಿದ್ದಾರೆ.

ಆದೇಶವೇನು..
1. ರಾಜ್ಯದಲ್ಲಿ ಇನ್ನು ಹಸಿರು ಪಟಾಕಿ ಬಳಸಲು ಮಾತ್ರ ಅವಕಾಶ
2. ಅ.31ರ ರಾತ್ರಿ 8ರಿಂದ 10 ಗಂಟೆ ವರೆಗೆ ಪಟಾಕಿ ಸಿಡಿಸಲು ಅವಕಾಶ
3. ಹಸಿರೇತರ ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟಕ್ಕೆ ನಿಷೇಧ
3. ಪಟಾಕಿ ಮಾರಾಟಗಾರರಿಂದ ಮುಚ್ಚಳಿಕೆ ಪಡೆಯಲು ನಿರ್ಧಾರ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments