Friday, September 12, 2025
21 C
Bengaluru
Google search engine
LIVE
ಮನೆ#Exclusive NewsTop Newsರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್' ಸಿನಿಮಾ ವಿರುದ್ಧ ಸಿಡಿದೆದ್ದಿದ್ಯಾಕೆ ಅರಣ್ಯ ಸಚಿವ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್’ ಸಿನಿಮಾ ವಿರುದ್ಧ ಸಿಡಿದೆದ್ದಿದ್ಯಾಕೆ ಅರಣ್ಯ ಸಚಿವ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನದ ಈ ಸಿನಿಮಾಕ್ಕಾಗಿ ರಾಕಿ ಭಾಯ್ ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದು, ಈಗ ಅವರಿಗೆ ಬೆಸರ ತಂದಿದೆ. ಕೆಜಿಎಫ್‌, ಕೆಜಿಎಫ್‌ 2 ಭಾರೀ ಸಕ್ಸಸ್ ನಂತರ ಟಾಕ್ಸಿಕ್ ಎಂಬ ಪ್ಯಾನ್ ಇಂಡಿಯಾ ಮೂವಿ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯೋಕೆ ಯಶ್ ಕೂಡ ಸಜ್ಜಾಗಿದ್ದಾರೆ. ಈ ಹೊತ್ತಲ್ಲೇ ಯಶ್ ಸಿನಿಮಾಕ್ಕೆ ಭಾರೀ ಸಂಕಷ್ಟ ಎದುರಾಗಿದೆ. ಖುದ್ದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೇ ಯಶ್ ಸಿನಿಮಾದ ವಿರುದ್ಧ ಕಿಡಿಕಾರಿದ್ದಾರೆ. ಕಠಿಣ ಕ್ರಮ ಕೈಗೊಳ್ಳುತ್ತೀನಿ ಅಂತ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ.

ಯಶ್ ಸಿನಿಮಾದ ವಿರುದ್ಧ ಸಚಿವ ಈಶ್ವರ್ ಖಂಡ್ರೆ ಗರಂ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ತಂಡದ ವಿರುದ್ಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಗರಂ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಖಂಡ್ರೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಅಂತ ಎಚ್ಚರಿಸಿದ್ದಾರೆ.

ನೂರಾರು ಮರಗಳನವ್ನು ಕಡಿದು ಅರಣ್ಯಕ್ಕೆ ಹಾನಿ

ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ ಅಂತ ಖಂಡ್ರೆ ಹೇಳಿದ್ದಾರೆ.

ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಅಂತ ಅರಣ್ಯ ಸಚಿವ ಈಶ್ವರ್ ಖಂಡ್ರೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments