10 ಜಿಲ್ಲೆಗಳಲ್ಲಿ ಅಕ್ರಮವಾಗಿ ತಲೆಯೆತ್ತಿರುವ ರೆಸಾರ್ಟ್ಸ್ & ಸ್ಟೇ ಹೋಂಗಳ ಅರಣ್ಯ ಒತ್ತುವರಿ ತೆರವು ಮಾಡಲು ಪಶ್ಚಿಮ ಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಾಪಡೆ ರಚಿಸುವುದಾಗಿ ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ನಾಳೆಯಿಂದಲೇ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಆರಂಭವಾಗಲಿದೆಯೆಂದು ಸ್ಪಷ್ಟನೆ ಹೇಳಿದ್ದಾರೆ. ಎಲ್ಲಾ ಅಧಿಕಾರಿಗಳು ವಾರದಲ್ಲಿ 2 ದಿನ ತಮ್ಮ ವಲಯದಲ್ಲಿ ತ್ವರಿತವಾಗಿ ಈ ಕಾರ್ಯಾಚರಣೆ ಕೈಗೊಳ್ಳಲು ಸೂಚನೆ ನೀಡಿದ್ದು, ನ್ಯಾಯಾಲಯದಲ್ಲಿನ ಪ್ರಕರಣ
ಇತ್ಯರ್ಥಕ್ಕೆ ಅಡ್ವೋಕೇಟ್ ಜನರಲ್ ರವರ ಜೊತೆ ಚರ್ಚಿಸುವುದಾಗಿ ತಿಳಿಸಿದ್ದಾರೆ. ಎಲ್ಲರಿಗೂ ಕಾನೂನು ಒಂದೇ ಎಂದು ಹೇಳಿರುವ ಅವರು ಅವೈಜ್ಞಾನಿಕ ರಸ್ತೆ ಕಾಮಗಾರಿ ವಿರುದ್ಧವು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇಂತಹದೇ ಕಾರಣದಿಂದಾಗಿ ವಯನಾಡು ಉತ್ತರ ಕನ್ನಡದಲ್ಲಿ ಗುಡ್ಡ ಕುಸಿತ ಉಂಟಾಗುತ್ತಿದ್ದು, ಈಗಲೂ ನಾವು ಹೆಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲವೆಂದು ತಿಳಿಸಿದ್ದಾರೆ.


