ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡ, ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿ ಆದೇಶ ನೀಡಿದ್ದು, ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ನಟಿ ರಮ್ಯಾ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ತೀರ್ಪು ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಬಲವಾದ ಸಂದೇಶವನ್ನು ರವಾನಿಸಿದೆ ಎಂದು ಬರೆದುಕೊಂಡಿದ್ದಾರೆ.
ನಾನು ಏನು ಹೇಳಲು ಬಯಸುತ್ತೇನೆ ಎಂದರೆ ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆಯನ್ನು ಇಟ್ಟುಕೊಳ್ಳಿ. ನ್ಯಾಯ ಸಿಗುವ ಪ್ರಕ್ರಿಯೆ ದೀರ್ಘ ಮತ್ತು ಕಠಿಣ ಹಾದಿಯಾದರೂ ಕೊನೆಯಲ್ಲಿ ನ್ಯಾಯಕ್ಕೆ ಗೆಲುವು ಸಿಗುತ್ತದೆ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯ ದೊರಕುತ್ತದೆ. ನಿಮ್ಮ ಆತ್ಮಸಾಕ್ಷಿಗೆ ನಿಷ್ಠರಾಗಿರಿ ಎಂದು ಮನವಿ ಮಾಡಿದ್ದಾರೆ.