ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು. ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ. ಯಾವಾಗ ಏನು ಮಾಡಬೇಕು ಎಂದು ಹೈಕಮಾಂಡ್‌ಗೆ ಗೊತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನಾಯಕರಿಗೆ ಖಡಕ್ ಸಂದೇಶ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಬಹಿರಂಗ ಆಗ್ರಹ ಕೇಳಿ ಬರುತ್ತಿರುವ ಬಗ್ಗೆ ಇಂದು ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಖರ್ಗೆ, ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ, ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್ ಗೆ ಗೊತ್ತಿದೆ ಎಂದರು.
ಕೆಲವರು ಹೇಳಿದ್ದಾರೆ, ಆ ಪ್ರಕಾರ ಹೈಕಮಾಂಡ್ ನಡೆಯೋದಿಲ್ಲ ಅಲ್ವಾ, ಎಲ್ಲರೂ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ, ಯಾವಾಗ ಏನು ನಿರ್ಣಯ ತೆಗೆದುಕೊಳ್ಳಬೇಕು ಅದು ನಮಗೆ ಬಿಟ್ಟಿದ್ದು. ಇದೆಲ್ಲ ಮಾತಾಡುವುದು ಪ್ರಯೋಜನಕ್ಕೆ ಬರುವುದಿಲ್ಲ. ಇದನ್ನೆಲ್ಲಾ ನೋಡಿಕೊಳ್ಳಲು ಹೈಕಮಾಂಡ್ ಇದೆ, ನಾವೆಲ್ಲ ಇದ್ದೇವೆ, ನಾವು ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು.
ಹೈಕಮಾಂಡ್ ಯಾವಾಗ ನಿರ್ಣಯ ತೆಗೆದುಕೊಳ್ಳಬೇಕು ಆಗ ತೆಗೆದುಕೊಳ್ಳುತ್ತದೆ. ಪಕ್ಷಕ್ಕೆ ದೊಡ್ಡ ಹಾನಿಯಾಗುತ್ತದೆ, ದಯವಿಟ್ಟು ಕಾಂಟ್ರವರ್ಸಿ ರಾಜ್ಯದಲ್ಲಿ ನಡೆಯಬಾರದು ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಖಡಕ್ ಎಚ್ಚರಿಕೆ ನೀಡಿದರು.