Wednesday, August 20, 2025
18.3 C
Bengaluru
Google search engine
LIVE
ಮನೆಕ್ರೈಂ ಸ್ಟೋರಿಮಸೀದಿಯಲ್ಲಿ ಸ್ಫೋಟ; ಇಬ್ಬರು ಅರೆಸ್ಟ್​

ಮಸೀದಿಯಲ್ಲಿ ಸ್ಫೋಟ; ಇಬ್ಬರು ಅರೆಸ್ಟ್​

ಮುಂಬೈ: ರಂಜಾನ್​​ ಹಬ್ಬದ ಒಂದು ದಿನ ಮೊದಲು ಭಾನುವಾರ ಮಹಾರಾಷ್ಟ್ರದ  ಬೀಡ್ ಜಿಲ್ಲೆಯ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ.

ಜಿಲೆಟಿನ್ ಕಡ್ಡಿಗಳಿಂದ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಸಾವುನೋವು ಸಂಭವಿಸಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಒಬ್ಬ ವ್ಯಕ್ತಿ ಮಸೀದಿಯ ಹಿಂಭಾಗದಿಂದ ಪ್ರವೇಶಿಸಿ ಜೆಲೆಟಿನ್ ಕಡ್ಡಿಗಳನ್ನು ಇಟ್ಟಿದ್ದ. ಇದರಿಂದಾಗಿ ಸ್ಫೋಟ ಸಂಭವಿಸಿದ್ದು ಮಸೀದಿಯ ಒಳಭಾಗಕ್ಕೆ ಹಾನಿಯಾಗಿದೆ.

ಜಿಯೋರೈ ತಹಸಿಲ್‌ನ ಗ್ರಾಮದಲ್ಲಿ ಬೆಳಗಿನ ಜಾವ 2:30 ರ ಸುಮಾರಿಗೆ ಸಂಭವಿಸಿದ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅವರು ಹೇಳಿದರು, ಸ್ಫೋಟದಿಂದ ಒಳಭಾಗಕ್ಕೆ ಹಾನಿಯಾಗಿದೆ

ಸ್ಫೋಟದ ಬಳಿಕ ಗ್ರಾಮದ ಮುಖ್ಯಸ್ಥರು ಬೆಳಿಗ್ಗೆ 4 ಗಂಟೆ ಸುಮಾರಿಗೆ ತಲವಾಡ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಬೀಡ್ ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಕನ್ವತ್ ಮತ್ತು ಇತರ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ.

ಸ್ಪೋಟದ ಬಳಿಕ ಇಬ್ಬರನ್ನು ಬಂಧಿಸಲಾಗಿದೆ ಎಂದು ಎಸ್​ಪಿ ಮಾಹಿತಿ ನೀಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸರು ಗ್ರಾಮದಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments