Tuesday, January 27, 2026
24 C
Bengaluru
Google search engine
LIVE
ಮನೆ#Exclusive Newsಸ್ನೇಹಮಯಿ ಕೃಷ್ಣನಿಂದ ಸ್ಪೋಟಕ ಹೇಳಿಕೆ...!

ಸ್ನೇಹಮಯಿ ಕೃಷ್ಣನಿಂದ ಸ್ಪೋಟಕ ಹೇಳಿಕೆ…!

ಬೆಂಗಳೂರು : ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬರುವ ಹರಕೆ ಸೀರೆಯಲ್ಲಿ ಗೋಲ್​ಮಾಲ್ ನಡೆದಿರುವ ಬಗ್ಗೆ ಧ್ವನಿ ಎತ್ತಿದ್ದ ಅವರ ವಿರುದ್ಧ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್​ಐಆರ್ ದಾಖಲಿಸಲಾಗಿತ್ತು. ಆ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್​ ಮಂಗಳವಾರ ತಡೆಯೊಡ್ಡಿತ್ತು. ಅದರ ಬೆನ್ನಲ್ಲೇ ಅವರು ಮಾಧ್ಯಮಗಳ ಮುಂದೆ ಪ್ರತ್ಯಕ್ಷರಾಗಿದ್ದಾರೆ. ಹೋರಾಟ ಹತ್ತಿಕ್ಕಲು ಸುಳ್ಳು ಕೇಸ್ ದಾಖಲಿಸಿದ್ದಾರೆ ಎಂದು ಆರೋಪಿಸಿರುವ ಅವರು, ಹೋರಾಟ ನಿಲ್ಲಿಸಲು ಆಮಿಷವೊಡ್ಡಿದ್ದ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಹೋರಾಟ ನಿಲ್ಲಿಸಲು ನನಗೆ ಆಮಿಷವೊಡ್ಡಿದ್ದರು. ಆದರೆ, ನಾನು ಯಾವುದಕ್ಕೂ ಒಪ್ಪಲಿಲ್ಲ. ಆ ಕಾರಣಕ್ಕೆ ನನ್ನ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ. ಲೋಕಾಯುಕ್ತ ತನಿಖೆಯಾಗಲಿ, ಸಿಬಿಐಗೆ ಬೇಡ ಎಂದು ನನಗೆ ಆಮಿಷವೊಡ್ಡಿದ್ದರು ಎಂದು ತಿಳಿಸಿದ್ದಾರೆ.

ಲೋಕಾಯಕ್ತಕ್ಕೆ ದೂರು ನೀಡುವೆ: ಸ್ನೇಹಮಯಿ ಕೃಷ್ಣ

ಸಿಬಿಐ ತನಿಖೆ ಬೇಡ ಎಂದು ಆಮಿಷವೊಡ್ಡಿದ್ದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡುತ್ತೇನೆ. ಯಾರು, ಯಾವಾಗ ಆಮಿಷವೊಡ್ಡಿದ್ದರು ಎಂಬ ಬಗ್ಗೆ ದೂರಿನಲ್ಲಿ ಉಲ್ಲೇಖಿಸುತ್ತೇನೆ. ಸಿಬಿಐ ತನಿಖೆಯಾದರೆ ಸಿಕ್ಕಿ ಹಾಕಿಕೊಳ್ಳುವ ಭಯ ಶುರುವಾಗಿದೆ. ಹೀಗಾಗಿ ನನ್ನ ಹೋರಾಟ ಹತ್ತಿಕ್ಕಲು ಯತ್ನಿಸುತ್ತಿದ್ದಾರೆ. ಆದರೆ ಅದು ಸಾಧ್ಯವೇ ಇಲ್ಲ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

ಈ ಹಿಂದೆಯೇ ನನಗೆ ಭದ್ರತೆ ಕೊಡಿ ಎಂದು ಪೊಲೀಸರಿಗೆ ಮನವಿ ಮಾಡಿದ್ದೆ. ಆದರೆ ಅವರು ಭದ್ರತೆ ನೀಡಿಲ್ಲ, ಕನಿಷ್ಠ ಹಿಂಬರಹ ಸಹ ನೀಡಿಲ್ಲ. ನನಗೆ ಯಾವ ಪೊಲೀಸ್ ಭದ್ರತೆಯೂ ಬೇಡ. ಸಿಎಂ ಸಿದ್ದರಾಮಯ್ಯ ಕೃಪಾಕಟಾಕ್ಷದ ಅಧಿಕಾರಿ ನನಗೆ ಯಾವ ರೀತಿ ರಕ್ಷಣೆ ನೀಡುತ್ತಾರೆ? ಅಲ್ಲವೇ ಎಂದು ಸ್ನೇಹಮಯಿ ಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ನನಗೆ ರಾಜ್ಯದ ಜನರ ರಕ್ಷೆ ಇದೆ, ದೇವರ ಕೃಪೆ ಇದೆ, ಅಷ್ಟೇ ಸಾಕು. ನಾಳೆ ಸಿಬಿಐಗೆ ವಹಿಸುವ ಮಹತ್ವದ ವಿಚಾರಣೆ ನಡೆಯಲಿದೆ. ಜಾರಿ ನಿರ್ದೇಶನಾಲಯವನ್ನು ಪ್ರತಿವಾದಿ ಮಾಡುವಂತೆ ಮನವಿ ಮಾಡಲಿದ್ದೇವೆ. ಇದರಿಂದ ಇ.ಡಿ ತನಿಖೆ ಮಾಹಿತಿ ಸಹ ಹೈಕೋರ್ಟ್‌ಗೆ ಸಿಗಲಿದೆ. ಇದು ನಮ್ಮ ಆರೋಪ ಸಾಬೀತುಪಡಿಸಲು ಅನುಕೂಲವಾಗಲಿದೆ. ಹೋರಾಟ ಹತ್ತಿಕ್ಕುವ ಪ್ರಯತ್ನದ ಬಗ್ಗೆಯೂ ಹೈಕೋರ್ಟ್ ಗಮನಕ್ಕೆ ತರುತ್ತೇನೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments