#Exclusive NewsTop Newsಮನರಂಜನೆಸಿನಿಮಾಸುದ್ದಿ
ಖ್ಯಾತ ನಟಿ ಕೀರ್ತಿ ಸುರೇಶ್ ಮದುವೆ ಫೋಟೋ ವೈರಲ್…..

ಖ್ಯಾತ ನಟಿ ಕೀರ್ತಿ ಸುರೇಶ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಾಲ್ಯದ ಗೆಳೆಯ ಆಂಟೊನಿ ತಟ್ಟಿಲ್ ಜೊತೆ ಅವರು ಹಸೆಮಣೆ ಏರಿದ್ದಾರೆ. ದಕ್ಷಿಣ ಭಾರತದ ಸಂಪ್ರದಾಯದ ರೀತಿ ಕೀರ್ತಿ ಸುರೇಶ್ ಅವರ ಮದುವೆ ನಡೆದಿದೆ. ಇಂದು (ಡಿಸೆಂಬರ್ 12) ಗೋವಾದಲ್ಲಿ ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಕೀರ್ತಿ ಸುರೇಶ್ ಮತ್ತು ಆಂಟೊನಿ ಅವರು ಮದುವೆ ಆಗಿದ್ದಾರೆ. ನಂತರ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.





