Freedom TV

ಹುಲಿ ದಾಳಿಯಿಂದ ರೈತ ಸಾವು: ಸಚಿವ ಈಶ್ವರ್​ ಖಂಡ್ರೆಗೆ ಘೇರಾವ್ ಹಾಕಿದ ರೈತರು

ಮೈಸೂರು: ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಿನ್ನೆ ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರ್​ ಅವರ ಕುಟುಂಬ ಹಾಗೂ ರೈತ ಮುಖಂಡರು ಸರ್ಕಾರಿ ವೈದ್ಯಕೀಯ ಕಾಲೇಜಿನ ಶವಗಾರದ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ..

ಪ್ರತಿಭಟನಾ ಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್​ ಖಂಡ್ರೆಗೆ ರೈತರು ಘೇರಾವ್​ ಹಾಕಿರುವ ಪ್ರಸಂಗ ನಡೆದಿದೆ. ನಿನ್ನೆ ಹುಲಿ ದಾಳಿಯಿಂದ ರೈತ ರಾಜಶೇಖರ(58) ಸಾವನ್ನಪ್ಪಿದ್ದು, ರೈತ ರಾಜಶೇಖರ ಅವರ ಶವ ಇದ್ದ ಮೈಸೂರಿನ ಕೆ.ಆರ್.ಆಸ್ಪತ್ರೆ ಶವಾಗಾರಕ್ಕೆ ಸಚಿವರು ಭೆಟಿ ನೀಡಿದ್ದರು. ಈ ವೇಳೆ ಘೇರಾವ್​ ಹಾಕಲಾಗಿದ್ದು, ಸಂಬಂಧಪಟ್ಟ ಅರಣ್ಯ ಅಧಿಕಾರಿಗಳ ಅಮಾನತು ಮಾಡಬೇಕು. ಮೃತನ ಕುಟುಂಬಕ್ಕೆ ಪರಿಹಾರ ಘೋಷಿಸಬೇಕೆಂದು ಆಗ್ರಹಿಸಲಾಗಿದೆ.

ಇದೇ ವೇಳೆ ಈಶ್ವರ್ ಖಂಡ್ರೆ ಮಾತನಾಡಿ, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡುತ್ತೇವೆ, ಹೆಚ್ಚಿನ ಪರಿಹಾರಕ್ಕೂ ಪ್ರಯತ್ನಿಸುತ್ತೇವೆ. ಯಾರೇ ಅಕ್ರಮ ಮಾಡಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ..

Comments (0)

Your email address will not be published. Required fields are marked *

Back to top button