ಕ್ರೈಂ ಸ್ಟೋರಿರಾಜ್ಯ

ರೈತ ಮುಖಂಡ ಕುರುಬೂರ್ ಶಾಂತಕುಮಾರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲು

ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಅವರಿದ್ದ ಕಾರು ಅಪಘಾತಕ್ಕೀಡಾಗಿದೆ.  ಪಂಜಾಬ್‌ನ ಪಟಿಯಾಲದಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡಿರುವ ಶಾಂತಕುಮಾರ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ದೆಹಲಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ರೈತ ಮುಖಂಡರ ಸಭೆಯಲ್ಲಿ ಭಾಗವಹಿಸಲು ಶಾಂತಕುಮಾರ್ ಅವರು ತೆರಳುತ್ತಿದ್ದರು. ಈ ವೇಳೆ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಶಾಂತಕುಮಾರ್ ಸೇರಿ ತಮಿಳುನಾಡಿನ ಪಾಂಡಿಯನ್ ಕೂಡ ಗಾಯಗೊಂಡಿದ್ದಾರೆ. ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Comments (0)

Your email address will not be published. Required fields are marked *

Back to top button