Wednesday, September 10, 2025
23.5 C
Bengaluru
Google search engine
LIVE
ಮನೆ#Exclusive NewsTop Newsಅನ್ಯಜಾತಿ ಹುಡಗನನ್ನ ಲವ್ ಮಾಡಿದ್ದಕ್ಕೆ ಮಗಳನ್ನೇ ಕೊಂದ ತಂದೆ

ಅನ್ಯಜಾತಿ ಹುಡಗನನ್ನ ಲವ್ ಮಾಡಿದ್ದಕ್ಕೆ ಮಗಳನ್ನೇ ಕೊಂದ ತಂದೆ

ಕಲಬುರಗಿ : ಅನ್ಯಜಾತಿ ಹುಡುಗನನ್ನ ಪ್ರೀತಿಸಿದ್ದಾಳೆ ಎಂಬ ಕಾರಣಕ್ಕೆ ತಂದೆಯೇ ಮಗಳನ್ನ ಹತ್ಯೆ ಮಾಡಿ ಸುಟ್ಟು ಹಾಕಿರುವ ತಂಘಟನೆ, ಕಲಬುರಗಿ ತಾಲೂಕಿನ ಮೇಳಕುಂದಾ ಗ್ರಾಮದಲ್ಲಿ ನಡೆದಿದೆ..

18 ವರ್ಷದ ಮಗಳನ್ನ ಕೊಲೆ ಮಾಡಿರುವ ತಂದೆ ಶಂಕರ್ ಕೊಳ್ಳರುನನ್ನು ಫರಹತಬಾದ್ ಪೊಲೀಸರು ಬಂಧಿಸಿದ್ದಾರೆ. ಕವಿತಾ ಕೊಲಾಯಾದ ಮಗಳು. ಮಗಳ ಕೊಲೆ ಮಾಡಲು ತಂದೆ ಶಂಕರ್‌ ಗೆ ಸಾಥ್‌ ನೀಡಿದ ಶರಣು ಮತ್ತು ದತ್ತಪ್ಪ ಎನ್ನುವವರ ಮೇಲೆ ಕೂಡ‌ ಕೇಸ್ ದಾಖಲಾಗಿದ್ದು, ಇಬ್ಬರ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ.

ಯುವತಿ ತಂದೆ ಶಂಕರ್​, ಸಹೋದರ ಶರಣು, ಸಂಬಂಧಿ ದತ್ತು ಆಕೆಯ ಕತ್ತು ಹಿಸುಕಿ ಕೊಲೆ ಮಾಡಿ, ಕ್ರಿಮಿನಾಶಕ ಸಿಂಪಡಿಸಿ ವಿಷ ಸೇವಿಸಿ, ಮೃತಪಟ್ಟಿದ್ದಾಳೆಂದು ಬಿಂಬಿಸಿದ್ದಾರೆ. ನಂತರ ಬೆಳಗ್ಗೆ ಸುಮಾರಿಗೆ ಗ್ರಾಮದ ಹೊರವಲಯದ ಸಂಬಂಧಿಕರ ಜಮೀನಿನಲ್ಲಿ ದೇಹವನ್ನು ಸುಟ್ಟು ಹಾಕಿದ್ದಾರೆ.

ಹೆತ್ತ ಮಗಳನ್ನು ಕೊಂದು ಮೊದಲು ಆತ್ಮಹತ್ಯೆ ಕುಡಿದುಕೊಂಡಿದ್ದಾಳೆಂದು ಬಿಂಬಿಸಿದ್ದರು. ಆದರೆ ಪೊಲೀಸರ ತನೀಖೆಯ ವೇಳೆ ಈ ಘನಘೋರ ಕೃತ್ಯ ಬಯಲಾಗಿದೆ. ಇಂತಹದೊಂದು ಘೋರ ಕೃತ್ಯಕ್ಕೆ ಇಡೀ ಜಿಲ್ಲೆ ಬೆಚ್ಚಿ ಬಿದಿದ್ದು, ಊರಿಗೆ ಊರೇ ಬೂದಿ ಮುಚ್ಚಿದ ಕೆಂಡದಂತಾಗಿದೆ. ಯಾಕೆಂದರೆ ಇಡೀ ಗ್ರಾಮದಲ್ಲಿ ಯಾರೂ ಕೂಡ ಮಾತನಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಸದ್ಯ ಫರಹತಾಬಾದ್ ಪೊಲೀಸ್​ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಸ್ಥಳಕ್ಕೆ ನಗರ ಪೊಲೀಸ್​ ಆಯುಕ್ತ ಡಾ.ಶರಣಪ್ಪ ಎಸ್​.ಡಿ., ಪಿಐ ಮಂಜುನಾಥ ಇಕ್ಕಳಕಿ ಸೇರಿದಂತೆ ಇತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments