ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ರವರ 28ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಶ್ರೀ ಐ.ಪಿ.ಡಿ. ಸಾಲಪ್ಪ ರವರ ಪ್ರತಿಮೆಗೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಮಾಲಾರ್ಪಣೆ ಮಾಡಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ವೇಳೆ ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಅವಿನಾಶ್ ಮೆನನ್ ರಾಜೇಂದ್ರನ್, ಪೂರ್ವ ವಲಯ ಆಯುಕ್ತರಾದ ಶ್ರೀಮತಿ ಸ್ನೇಹಲ್, ಉಪ ಆಯುಕ್ತರಾದ ಮಂಜುನಾಥ್ ಸ್ವಾಮಿ, ಜಂಟಿ ಆಯುಕ್ತರಾದ ಪ್ರತಿಭಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.