ಕಾಪಿ ರೈಟ್ಸ್ (Copyright) ಉಲ್ಲಂಘನೆ ಆರೋಪ ಹೊತ್ತಿರೋ ನಟ ರಕ್ಷಿತ್ ಶೆಟ್ಟಿ (Rakshit Shetty) ಗೆ ಬಂಧನದ ಭೀತಿ ಎದುರಾಗಿದೆ. ಹಾಗಾಗೇ ಅವರು ನಿರೀಕ್ಷಣಾ ಜಾಮೀನು (Bail) ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಸಿನಿಮಾಗೆ ಅನುಮತಿ ಇಲ್ಲದೇ ಎರಡು ಹಾಡುಗಳನ್ನು ಬಳಸಿದ್ದರು ರಕ್ಷಿತ್ ಶೆಟ್ಟಿ. ಹಾಗಾಗಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ರಕ್ಷಿತ್ ಶೆಟ್ಟಿ ಮತ್ತು ಅವರ ನಿರ್ಮಾಣ ಸಂಸ್ಥೆ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.
ನಿರೀಕ್ಷಣಾ ಜಾಮೀನು ಕೋರಿ ರಕ್ಷಿತ್ ಶೆಟ್ಟಿ ಬೆಂಗಳೂರಿನ ಸೆಷನ್ಸ್ ಕೋರ್ಟ್ (Court) ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ನ್ಯಾಯ ಎಲ್ಲಿದೆ ಸಾಂಗ್ ಕಾಪಿ ರೈಟ್ಸ್ ಉಲ್ಲಂಘನೆ ಆರೋಪ ಇವರ ಮೇಲಿದೆ. ಬ್ಯಾಚಲರ್ಸ್ ಪಾರ್ಟಿ ಸಿನಿಮಾಗಾಗಿ ಅನಧಿಕೃತವಾಗಿ ಆ ಹಾಡನ್ನು ರಕ್ಷಿತ್ ಶೆಟ್ಟಿ ಒಡೆತನದ ನಿರ್ಮಾಣ ಸಂಸ್ಥೆ ಬಳಕೆ ಮಾಡಿಕೊಂಡಿತ್ತು. ಪರಮವಾ ಸ್ಟೂಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ಮೇಲೆ ಎಫ್ ಐ ಆರ್ ದಾಖಲಾಗುತ್ತಿದ್ದಂತೆ ಸೋಷಿಯಲ್ ಮೀಡಿಯಾ ಮೂಲಕ ಪ್ರತಿಕ್ರಿಯೆ ಕೂಡ ನೀಡಿದ್ದರು. ಇದೀಗ ರಕ್ಷಿತ್ ಶೆಟ್ಟಿ ನ್ಯಾಯಾಲಯ ಮೊರೆ ಹೋಗಿದ್ದಾರೆ. ರಕ್ಷಿತ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಲಾಗಿದ್ದು, ವಿಚಾರಣೆಯನ್ನು ಜುಲೈ 24 ಕ್ಕೆ ಸೆಷನ್ಸ್ ಕೋರ್ಟ್ ಮುಂದೂಡಿದೆ.