Top Newsದೇಶ/ವಿದೇಶ

ರಾಜ್ಯದಲ್ಲಿ ರಸಗೊಬ್ಬರ ಕೊರತೆ; ಜೆಪಿ ನಡ್ಡಾ ಭೇಟಿ ಮಾಡಿ ಮನವಿ ಮಾಡಿದ ಜೋಶಿ & ಟೀಂ

ದೆಹಲಿ: ರಾಜ್ಯದಲ್ಲಿ ಮುಂಗಾರು ಮಳೆ ಉತ್ತಮವಾಗಿದ್ದು, ರೈತರು ಉತ್ತಮ ಬೆಳೆ ಬರುವ ನಿರೀಕ್ಷೆಯಲ್ಲಿದ್ದಾರೆ. ಆದ್ರೆ ಸರಿಯಾದ ಸಮಯಕ್ಕೆ ರಸಗೊಬ್ಬರ ಕೊರತೆ ಉಂಟಾಗಿದ್ದು ಅನ್ನದಾತರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಇದೀಗ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸೇರಿ ರಾಜ್ಯದ ಬಿಜೆಪಿ ಸಂಸದರು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವರಾದ ಶ್ರೀ ಜೆಪಿ ನಡ್ಡಾ ಭೇಟಿ ಮಾಡಿ ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.

ನಡ್ಡಾ ಭೇಟಿ ಬಗ್ಗೆ ಎಕ್ಸ್​ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು  ಕರ್ನಾಟಕದಲ್ಲಿ ರಸಗೊಬ್ಬರದ ಅಭಾವವಿಲ್ಲಾ. ಕೇಂದ್ರ ಸರ್ಕಾರದಿಂದ ಸರಬರಾಜು ಆಗಿರುವ ರಸಗೊಬ್ಬರಗಳಲ್ಲಿ 1.65 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಸಂಗ್ರಹಣೆ ಮಾಡಲಾಗಿದೆ. ರೈತರಿಗೆ ಬೇಕಾದ ರಸಗೊಬ್ಬರಗಳನ್ನು ರಾಜ್ಯ ಸರ್ಕಾರಕ್ಕೆ ಈಗಾಗಲೇ ನೀಡಲಾಗಿದ್ದು, ಸರಿಯಾದ ಕ್ರಮದಲ್ಲಿ ಬಳಸಬೇಕಿದೆ. ಇನ್ನೂ ರಸಗೊಬ್ಬರದ ಬೇಡಿಕೆ ಹೆಚ್ಚಿದ್ದು, ಅಗತ್ಯ ರಸಗೊಬ್ಬರಗಳನ್ನು ಕರ್ನಾಟಕಕ್ಕೆ ಸರಬರಾಜು ಮಾಡುವಂತೆ ಮನವಿ ಸಲ್ಲಿಸಲಾಗಿದೆ ಎಂದ್ರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ರೈತರ ಬೆನ್ನೆಲುಬಾಗಿ ನಿಂತಿದ್ದು, ಎಂತಹದ್ದೇ ಸಮಯದಲ್ಲೂ ರೈತರ ಹಿತ ಕಾಪಾಡುವುದು ನಮ್ಮ ಸರ್ಕಾರದ ಧ್ಯೇಯವಾಗಿದೆ. ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವರಾದ ಶ್ರೀ ಜೆಪಿ ನಡ್ಡಾ ಅವರಿಗೆ ಧನ್ಯವಾದ ಎಂದು ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button
Verified by MonsterInsights