ದೇಶ/ವಿದೇಶವೈರಲ್ ನ್ಯೂಸ್

ತುಂಬಿಸಿಕೊಳ್ರೋ ಮತ್ತೆ ಸಿಗುತ್ತೋ ಇಲ್ವೋ..?ಪೆಟ್ರೋಲ್ ಬಂಕ್ಗಳ ಮುಂದೆ ನೂಕುನುಗ್ಗಲು!

ಚೆನ್ನೈ: ಚುನಾವಣಾ ಕಾವು ಹೆಚ್ಚಿರುವ ತಮಿಳುನಾಡಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ಉಂಟಾಗಬಹುದು ಎಂಬ ವದಂತಿ ಜನರಲ್ಲಿ ಆತಂಕ ಸೃಷ್ಟಿಸಿದೆ. ವಾಸ್ತವದಲ್ಲಿ ಯಾವುದೇ ಕೊರತೆ ಇಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದರೂ, ಭಯದಿಂದ ಜನರು ಪೆಟ್ರೋಲ್ ಬಂಕ್ಗಳ ಮುಂದೆ ಸಾಲುಗಟ್ಟಿ ನಿಂತಿರುವ ದೃಶ್ಯಗಳು ಕಂಡುಬರುತ್ತಿವೆ.
ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಾಗಬಹುದು ಎಂಬ ಭೀತಿಯಿಂದ ಸಾರ್ವಜನಿಕರು ಕಳೆದ ರಾತ್ರಿಯಿಂದಲೆ ಬಂಕ್ ಗಳ ಮುಂದೆ ನೂಕುನುಗ್ಗಲು ನಡೆಸುತ್ತಿದ್ದಾರೆ. ಕೆಲವರು ನೀರಿನ ಕ್ಯಾನ್ಗಳನ್ನೇ ತೆಗೆದುಕೊಂಡು ಬಂದು ಪೆಟ್ರೋಲ್ ಸಂಗ್ರಹಿಸಲು ಮುಂದಾಗಿರುವುದು ಗಮನಸೆಳೆಯುತ್ತಿದೆ .
ತಮಿಳುನಾಡಿನ ಹಲವು ಭಾಗಗಳಲ್ಲಿ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೆಲವು ಪೆಟ್ರೋಲ್ ಬಂಕ್ ಗಳ ಮುಂದೆ ಜನರ ಗಲಾಟೆಯೂ ನಡೆದಿದೆ.

Comments (0)

Your email address will not be published. Required fields are marked *

Back to top button