Monday, June 23, 2025
26.6 C
Bengaluru
Google search engine
LIVE
ಮನೆ#Exclusive Newsಕಾಂಗ್ರೆಸ್ ಕಚೇರಿಯಿಂದ ಅಂತಿಮ ಯಾತ್ರೆ, ಜಾಗತಿಕ ಭಾರತದ ಶಿಲ್ಪಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಅಂತಿಮ...

ಕಾಂಗ್ರೆಸ್ ಕಚೇರಿಯಿಂದ ಅಂತಿಮ ಯಾತ್ರೆ, ಜಾಗತಿಕ ಭಾರತದ ಶಿಲ್ಪಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಅಂತಿಮ ನಮನ

ನವದೆಹಲಿ/ಬೆಂಗಳೂರು: ಮಾಜಿ ಪ್ರಧಾನಿ, ಜಾಗತಿಕ ಭಾರತದ ಶಿಲ್ಪಿ ಡಾ.ಮನಮೋಹನ್ ಸಿಂಗ್(92) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ನೆರವೇರಲಿದ್ದು, ಅಂತ್ಯಕ್ರಿಯೆಗೆ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಮನಮೋಹನ್​ ಸಿಂಗ್​ ನಿಧನಕ್ಕೆ ಇಡೀ ದೇಶವೇ ಕಂಬನಿ ಮುಡಿಯುತ್ತಿದ್ದು, ಗಣ್ಯಾತಿಗಣ್ಯರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ದೆಹಲಿ ತಲುಪಿದ್ದು, ದೇಶದ ಕಂಡ ಶ್ರೇಷ್ಠ ಅರ್ಥಶಾಸ್ತ್ರಜ್ಞನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಮಾಜಿ ಪ್ರಧಾನಿಯ ಪ್ರಾರ್ಥಿವ ಶರೀರ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿ ತಲುಪಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಇತರೆ ​ ನಾಯಕರು ಮತ್ತೊಮ್ಮೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಬಳಿಕ ಕಾಂಗ್ರೆಸ್​ ಕಚೇರಿಯಿಂದ ಮನಮೋಹನ್​ ಸಿಂಗ್​ ಅವರ ಅಂತಿಮ ಯಾತ್ರೆ ಆರಂಭವಾಗಲಿದೆ.

ಮನಮೋಹನ್ ಸಿಂಗ್ ವಯೋಸಹಜ ಕಾಯಿಲೆಯಿಂದಾಗಿ ಕೊನೆಯುಸಿರೆಳೆದಿದ್ದಾರೆ. ಮನೆಯಲ್ಲಿ ದಿಢೀರ್ ಪ್ರಜ್ಞೆ ತಪ್ಪಿದ ನಂತರ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿತ್ತು.

ಮನಮೋಹನ್ ಸಿಂಗ್ 1932ರ ಸೆಪ್ಟೆಂಬರ್ 26ರಂದು ಜನಿಸಿದರು. ಶ್ರೇಷ್ಠ ಅರ್ಥಶಾಸ್ತ್ರಜ್ಞ ಮಾತ್ರವಲ್ಲದೇ 1982-1985ರವರೆಗೆ ಭಾರತೀಯ ರಿಸರ್ವ್ ಬ್ಯಾಂಕ್‌ನ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದರು. 2004-2014ರ ಅವಧಿಯಲ್ಲಿ ದೇಶದ 13ನೇ ಪ್ರಧಾನಿಯಾಗಿದ್ದರು. ಹಣಕಾಸು ಸಚಿವರಾಗಿ 1991 ಮತ್ತು 1996ರ ನಡುವೆ ಐದು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು. ಆರ್ಥಿಕ ಸುಧಾರಣೆಗಳ ಸಮಗ್ರ ನೀತಿಯನ್ನು ಪರಿಚಯಿಸುವಲ್ಲಿ ಅವರ ಪಾತ್ರವನ್ನು ವಿಶ್ವಾದ್ಯಂತ ಗುರುತಿಸ

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments