ಮಂಗಳೂರು : ಮಂಗಳೂರಿನ ಜೆಪ್ಪುವಿನಲ್ಲಿರುವ ಸೇಂಟ್ ಜೆರೋಸಾ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇರೆಗೆ ಶಾಲೆ ಬಳಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಜೆರೋಸಾ ಶಾಲೆಯ ಪ್ರಕರಣದ ಕುರಿತು ಮಾತನಾಡಿರುವ ಶಾಸಕ ಭರತ್ ಶೆಟ್ಟಿ, ನನ್ನ ಮೇಲೆ ದುರುದ್ದೇಶದಿಂದ ಎಫ್ಐಆರ್ ಹಾಕಲಾಗಿದೆ , ಮೊದಲು ಹರೀಶ್ ಪೂಂಜಾ ಮೇಲೆ ಕೇಸ್ ಹಾಕಿದ್ರು. ಈಗ ನನ್ನ ಹಾಗೂ ವೇದವ್ಯಾಸ ಕಾಮತ್ ಮೇಲೆ ಕೇಸ್ ಹಾಕಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.ಕಾಂಗ್ರೆಸ್ ಪಕ್ಷ ತಾಲಿಬಾನ್ ನಂತೆ ವರ್ತಿಸ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ರು , ಜೈ ಶ್ರೀರಾಮ ಎನ್ನುವರ ಮೇಲೆ ಕೇಸ್ ಹಾಕುತ್ತಿದ್ದಾರೆ.
ರಾಮನನ್ನ ಅವಹೇಳನ ಮಾಡಿದವರನ್ನ ಬಿಟ್ಟು ರಾಮ ಭಕ್ತರ ವಿರುದ್ಧ ಕೇಸು ದಾಖಲಿಸೋ ಕಾಂಗ್ರೆಸ್ಸಿಗೆ ಜನ ಪಾಠ ಕಲಿಸಲಿದ್ದಾರೆ ಎಂದು ಭರತ್ ಶೆಟ್ಟಿ ಸರ್ಕಾರವನ್ನ ಪ್ರಶ್ನೆ ಮಾಡಿದರು.ನಾನು ಇದನ್ನ ಫೇಸ್ ಮಾಡುತ್ತೇನೆ , ನಾವು ಇಬ್ಬರು ಶಾಸಕರು ಜಾಮೀನು ಪಡೆಯೋದಿಲ್ಲ. ಈ ಪ್ರಕರಣವನ್ನ ಎದರಿಸುತ್ತೇವೆ. ಈ ಬಗ್ಗೆ ಸದನದ ಶೂನ್ಯ ವೇಳೆಯಲ್ಲಿ ಪ್ರಸ್ತಾಪ ಮಾಡಿದ್ದೇನೆ. ಆದ್ರೆ ಜಿಲ್ಲಾ ಉಸ್ತುವಾರಿ ಸಚಿವರು ಸರಿಯಾಗಿ ಉತ್ತರ ಕೊಟ್ಟಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.
ದಕ್ಷಿಣ ಕನ್ನಡ ಬಿಜೆಪಿ ನಾಯಕರು ಒಗ್ಗಟ್ಟಾಗಿ ಸರ್ಕಾರದ ಹಿಂದೂ ವಿರೋಧಿ ನೀತಿಯ ವಿರುದ್ಧ ಉಗ್ರ ಹೋರಾಟ ನಡೆಸಲಿದ್ದೇವೆ ಶಿಕ್ಷಕಿಯ ಧಾರ್ಮಿಕ ನಿಂದನೆ ಪ್ರಕರಣವನ್ನ ಇಲ್ಲಿಗೆ ನಿಲ್ಲಿಸುವುದಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.