ಕ್ರೈಂ ಸ್ಟೋರಿ

ಅಪಹಾಸ್ಯ ಮಾಡಿದ್ದಕ್ಕೆ FIR; ಬಿಜೆಪಿ ಕಚೇರಿಯಲ್ಲೆ ಕಾರ್ಯಕರ್ತ ಸೂಸೈಡ್​

ಕೊಡಗು: ರಾಜಕೀಯ ಒತ್ತಡ ಹಾಗೂ ಪೋಲಿಸ್​ ಕೇಸ್​​ನಿಂದ ಬೇಸತ್ತು ರಾಜ್ಯ ಬಿಜೆಪಿ ಕಾರ್ಯಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ. ತನ್ನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.

ಈ ಹಿಂದೆ ವಿನಯ್ ಸೋಮಯ್ಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು

ಈ ಪೋಸ್ಟ್‌ ವಿರುದ್ಧ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ  ಅವರನ್ನು ಪೊಲೀಸರು ಎರಡು ತಿಂಗಳ ಹಿಂದೆ ಅರೆಸ್ಟ್​ ಮಾಡಿದ್ದರು. ಈ ಘಟನೆಯಿಂದ ಮನನೊಂದಿದ್ದ ವಿನಯ್‌ ಇಂದು ಮುಂಜಾನೆ 4:30ರ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣದ ಮಾಹಿತಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಡೆದಿದ್ದಾರೆ. ಸದ್ಯ ಶಿವಮೊಗ್ಗದ ಶಿಕಾರಿಪುರದಲ್ಲಿ ವಿಜಯೇಂದ್ರ ಇದ್ದು ಇಂದು ಅಥವಾ ನಾಳೆ ಪೊನ್ನಣ್ಣ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ.

Comments (0)

Your email address will not be published. Required fields are marked *

Back to top button