Wednesday, February 25, 2026
28.5 C
Bengaluru
Google search engine
LIVE
ಮನೆಜಿಲ್ಲೆಚಿಕ್ಕಪೇಟೆಯಲ್ಲಿ ಬೆಂಕಿ ಅವಘಡ;ಲಕ್ಷಾಂತರ ರೂಪಾಯಿ ನಷ್ಟ.!

ಚಿಕ್ಕಪೇಟೆಯಲ್ಲಿ ಬೆಂಕಿ ಅವಘಡ;ಲಕ್ಷಾಂತರ ರೂಪಾಯಿ ನಷ್ಟ.!

ಬೆಂಗಳೂರು: ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಸಮೀಪವಿರುವ ಫ್ಯಾನ್ಸಿ ಸ್ಟೋರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಭೀಕರ ಬೆಂಕಿ ಕಾಣಿಸಿಕೊಂಡಿದೆ. ದಟ್ಟವಾದ ಹೊಗೆ ಇಡೀ ಪ್ರದೇಶವನ್ನು ಆವರಿಸಿದ್ದರಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿತ್ತು. ಘಟನೆಯಲ್ಲಿ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆರು ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಂಗಡಿಯ ಒಳಗೆ ದಟ್ಟ ಹೊಗೆ ತುಂಬಿಕೊಂಡಿದ್ದರಿಂದ ಅಗ್ನಿಶಾಮಕ ಸಿಬ್ಬಂದಿಗಳು ಆಕ್ಸಿಜನ್ ಸಿಲಿಂಡರ್ ಹಾಗೂ ಮಾಸ್ಕ್ ಧರಿಸಿ ಒಳಹೋಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಿರಿದಾದ ರಸ್ತೆಗಳಿರುವ ಈ ಭಾಗದಲ್ಲಿ ಬೆಂಕಿ ಹರಡದಂತೆ ತಡೆಯಲು ಅಗ್ನಿಶಾಮಕ ದಳವು ಸತತ ಪ್ರಯತ್ನ ನಡೆಸುತ್ತಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments