#Exclusive NewsTop Newsಜಿಲ್ಲೆಸುದ್ದಿ

ವುಡ್‌ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ; ಕೋಟ್ಯಂತರ ರೂ. ನಷ್ಟ!

ಬೆಂಗಳೂರು: ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿ ಇರುವ ಶ್ರೀರಾಮ್ ವುಡ್‌ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಹೊಸೂರು-ಬೆಂಗಳೂರು ಹೆದ್ದಾರಿಯಲ್ಲಿನ ಕಾರ್ಖಾನೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೋಟ್ಯಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

ಹೆದ್ದಾರಿಗೆ ಹೊಂದಿಕೊಂಡಿರುವುದರಿಂದ ಸಹಜವಾಗಿ ಆತಂಕ ಹೆಚ್ಚಾಗಿದ್ದು. ಭಾರೀ ಪ್ರಮಾಣದಲ್ಲಿ ಬೆಂಕಿಯ ಕೆನ್ನಾಲಿಗೆ ಆವರಿಸಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ.

ಸದ್ಯ ಘಟನೆ ಸಂದರ್ಭದಲ್ಲಿ ಒಳಗಡೆ ಯಾರೂ ಇರಲಿಲ್ಲ ಎನ್ನುವುದು ಸಮಾಧಾನ ತಂದಿದೆ. ಶ್ರೀರಾಮ್ ವುಡ್‌ ಫ್ಯಾಕ್ಟರಿ ಹರ್ಷದ್ ಪಟೇಲ್ ಎಂಬುವವರಿಗೆ ಸೇರಿದ ಕಾರ್ಖಾನೆ ಇದ್ದಾಗಿದ್ದು, ಮೇಲ್ನೋಟಕ್ಕೆ ಸುಮಾರು ಐದು ಕೋಟಿಗೂ ಹೆಚ್ಚು ಬೆಲೆ‌ ಬಾಳುವ ವುಡ್ ಬೆಂಕಿಗೆ ಆಹುತಿಯಾಗಿದೆ ಎಂದೆನ್ನಲಾಗಿದೆ.

Comments (0)

Your email address will not be published. Required fields are marked *

Back to top button