Freedom TV

ಫರ್ನಿಚರ್ ಶಾಪ್‍ನಲ್ಲಿ ಅಗ್ನಿ ಅವಘಡ; ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ಬೆಂಗಳೂರು: ಫರ್ನಿಚರ್ ಶಾಪ್ ಒಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, ಐದು ಕೋಟಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಗರದ ಮಲ್ಲೇಶ್ವರಂನ ಪೈಪ್ ಲೈನ್ ರೋಡ್‍ನಲ್ಲಿ ನಡೆದಿದೆ.

ಮಲ್ಲೇಶ್ವರಂನ ದತ್ತಾತ್ರೇಯ ದೇವಸ್ಥಾನ ರಸ್ತೆಯಲ್ಲಿರುವ ಅಂಗಡಿಯಲ್ಲಿ ಮಧ್ಯರಾತ್ರಿ 2:30ರ ಸುಮಾರಿಗೆ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ಅಕ್ಕಪಕ್ಕದ ಅಪಾರ್ಟ್‍ಮೆಂಟ್‍ನ 3 ಮನೆಗಳಿಗೂ ಆವರಿಸಿದೆ. 13 ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು.

ಇನ್ನು ಅಗ್ನಿ ಅವಘಡದ ವೇಳೆ ಅಂಗಡಿ ಒಳಗಡೆ ಸುಮಾರು 10 ಜನ ಕೆಲಸಗಾರರು ಮಲಗಿದ್ದರು. ಅಕ್ಕಪಕ್ಕದ ನಿವಾಸಿಗಳು ಅವರನ್ನು ಎಚ್ಚರಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Comments (0)

Your email address will not be published. Required fields are marked *

Back to top button