ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ, ನೋಡನೋಡುತ್ತಲೇ ಬಸ್ ಸುಟ್ಟು ಕರಕಲಾಗಿದೆ..
ಹೆಚ್ಎಎಲ್ ಮುಖ್ಯದ್ವಾರದ ಬಳಿ ಘಟನೆ ನಡೆದಿದ್ದು, ಬಸ್ನಲ್ಲಿ ಇದ್ದ 75 ಜನರು ಪ್ರಣಾಪಾಯದಿಂದ ಪಾರಗಿದ್ದಾರೆ. ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳ್ತಿದ್ದ ಬಸ್ ನಲ್ಲಿ ಬೆಳಗಿನ ಜಾವ 5:10ಕ್ಕೆ ಅಗ್ನಿ ದುರಂತ ಸಂಭವಿಸಿದೆ. ಬಸ್ ನ ಎಂಜಿನ್ ನಲ್ಲಿ ಹೊಗೆ ಕಾಣಿಸ್ತಿದ್ದಂತೆ ಚಾಲಕ ಎಚ್ಚೆತ್ತು, ತಕ್ಷಣ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ಕ್ರಮೇಣ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡು ಬಸ್ ಧಗಧಗಿಸಿದೆ. ಚಾಲಕನ ಸಮಯಪ್ರಜ್ಷೆಯಿಂದ 75 ಪ್ರಯಾಣಿಕರು ಸೇಫ್ ಆಗಿದ್ದಾರೆ.ಬಳಿಕ ಹೆಚ್ಎಲ್ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸದ್ಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಎಂಟಿಸಿ ಬೆಂಕಿ ಕಾಣಿಸಿಕೊಳ್ಳಲು ಕಾರಣ ಪತ್ತೆ ಹಚ್ಚಲು ಮುಂದಾಗಿದೆ.


