Top Newsಜಿಲ್ಲೆರಾಜಕೀಯರಾಜ್ಯಸುದ್ದಿ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪಾರು!

ಕೊಡಗು: ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭಾನುವಾರ ಬೆಳಿಗ್ಗೆ ಭೀಕರ ಅವಘಡವೊಂದು ಸಂಭವಿಸಿದೆ. ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಚಲಿಸುತ್ತಿರುವಾಗಲೇ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ತಪ್ಪಿದೆ.

ಕಾರಿನಿಂದ ಹೊಗೆ ಮತ್ತು ಬೆಂಕಿ ಬರುತ್ತಿರುವುದನ್ನು ಗಮನಿಸಿದ ಅಬ್ದುಲ್ ಮಜೀದ್ ಹಾಗೂ ಚಾಲಕ ತಕ್ಷಣವೇ ಕಾರನ್ನು ನಿಲ್ಲಿಸಿ ಕೆಳಗಿಳಿದಿದ್ದಾರೆ. ಸಮಯ ಪ್ರಜ್ಞೆಯಿಂದಾಗಿ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಕುಶಾಲನಗರ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಈ ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಬೆಂಕಿ ಹೊತ್ತಿಕೊಳ್ಳಲು ತಾಂತ್ರಿಕ ದೋಷವೇ ಕಾರಣವೇ ಅಥವಾ ಬೇರೆ ಕಾರಣವಿದೆಯೇ ಎಂಬುದು ತನಿಖೆಯಿಂದ ತಿಳಿಯಬೇಕಿದೆ.

Comments (0)

Your email address will not be published. Required fields are marked *

Back to top button