ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಆರಂಭಗೊಂಡಿದೆ. ಬಿ ವೈ ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಮೊದಲ ಕಾರ್ಯಕಾರಿಣಿ ಸಭೆ ಇದಾಗಿದ್ದು. ಮಹತ್ವದ ನಿರ್ಣಯಗಳನ್ನ ಕೈಗೊಳ್ಳುವತ್ತ ಕುತೂಹಲ ಕೆರಳಿದೆ. ಶ್ರೀರಾಮನ ವಿಗ್ರಹಕ್ಕೆ ಹಾಲಿನ ಅಭಿಷೇಕ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಭೂಪೇಂದ್ರ ಯಾದವ್, ಪ್ರಲ್ಹಾದ್ ಜೋಶಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಿಎಂ ಗಳಾದ ಬಸವರಾಜ ಬೊಮ್ಮಾಯಿ, ನಿನ್ನೆಯಷ್ಟೆ ಪಕ್ಷಕ್ಕೆ ವಾಪಸ್ ಬಂದ ಜಗದೀಶ್ ಶೆಟ್ಟರ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ಶಾಸಕರು ಉಪಸ್ಥಿತರಿದ್ದಾರೆ.
ಇನ್ನು ಮುಂಬರಲಿರುವ ಲೋಕಸಭೆ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆಗಳು ನಡೆಯುವ ಸಾಧ್ಯತೆ ಇದೆ.