Tuesday, January 27, 2026
26.9 C
Bengaluru
Google search engine
LIVE
ಮನೆ#Exclusive NewsTop Newsಭಾರೀ ಮಳೆಗೆ ಬೆಣ್ಣೆಹಳ್ಳದಲ್ಲಿ ಪ್ರವಾಹ- ಅಪಾರ ಪ್ರಮಾಣದ ಬೆಳೆ ಜಲಾವೃತ

ಭಾರೀ ಮಳೆಗೆ ಬೆಣ್ಣೆಹಳ್ಳದಲ್ಲಿ ಪ್ರವಾಹ- ಅಪಾರ ಪ್ರಮಾಣದ ಬೆಳೆ ಜಲಾವೃತ

ಗದಗ: ಜಿಲ್ಲೆಯಲ್ಲಿ ಸುರಿದ ಭಾರಿ ಧಾರಾಕಾರ ಮಳೆಗೆ ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿಯಲ್ಲಿ ಪ್ರವಾಹ ಎದುರಾಗಿದೆ. ಇನ್ನು ರೋಣ ತಾಲೂಕಿನ ಮೆಣಸಗಿ ಬಳಿ ಅನೇಕ ಜಮೀನುಗಳು ಜಲಾವೃತವಾಗಿದ್ದು, ಬೆಳೆ ಕಳೆದುಕೊಂಡ ರೈತರು ಕಣ್ಣೀರಲ್ಲಿ ಕೈ ತೊಳೆಯುವಂತ ಪರಿಸ್ಥಿತಿ ಎದು.

ಮೆಕ್ಕೆಜೋಳ, ಕಬ್ಬು, ಸೂರ್ಯಕಾಂತಿ, ಶೇಂಗಾ, ಜೋಳ ಸೇರಿದಂತೆ ಅನೇಕ ಬೆಳೆಗಳು ಜಲಾವೃತವಾಗಿವೆ. ಅಪಾರ ಪ್ರಮಾಣದ ಬೆಳೆನಾಶದಿಂದ ರೈತರು ಕಂಗಾಲಾಗಿದ್ದಾರೆ. ಮೆಕ್ಕೆಜೋಳ ಫಸಲು ಕಟಾವಿಗೆ ಬಂದ ಸಂದರ್ಭದಲ್ಲಿ ನೀರಲ್ಲಿ ಮುಳುಗಡೆಯಾಗಿದೆ. ನೀರಲ್ಲಿ ಹಾನಿಯಾದ ಫಸಲು ಹೊರ ತೆಗೆಯಲು ರೈತರು ಹರಸಾಹಸ ಪಡುತ್ತಿದ್ದಾರೆ.

ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಪ್ರವಾಹ ಬಂದು 3 ಬಾರಿಯೂ ಬೆಳೆ ಹಾನಿಯಾಗಿದೆ. ಸರ್ಕಾರದಿಂದ ಯಾವುದೇ ರೀತಿಯ ನಯಾಪೈಸೆ ಪರಿಹಾರ ಬಂದಿಲ್ಲ. ಎಕರೆಗೆ ಹತ್ತಾರು ಸಾವಿರ ರೂಪಾಯಿ ಖರ್ಚುಮಾಡಿ ಸಾಲದ ಸುಳಿಗೆ ಸಿಲುಕುವಂತಾಗಿದೆ ಪರಿಸ್ಥಿತಿ ಎದುರಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ಬೆಳೆಯೂ ಇಲ್ಲ. ಇತ್ತ ಸರ್ಕಾರದಿಂದ ಪರಿಹಾರವೂ ಇಲ್ಲ ಎಂದು ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments