ಆಂಧ್ರಪ್ರದೇಶ: ಆಂಧ್ರದ ಕರ್ನೂಲ್ ಜಿಲ್ಲೆಯಲ್ಲಿ ಬಸ್ ಗೆ ಬೆಂಕಿ ಹೊತ್ತಿಕೊಂಡು 20 ಜನ ಸಾವನ್ನಪ್ಪಿದ ದುರಂತ ಮಾಸುವ ಮುನ್ನವೇ ಹೈದರಾಬಾದ್ ನಿಂದ ಆಂಧ್ರಪ್ರದೇಶಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಐಷರಾಮಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ನಡೆದಿದೆ..
ಪರಿಣಾಮ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಇಪ್ಪತ್ತು ಮಂದಿ ಗಾಯಗೊಂಡಿದ್ದಾರೆ.. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ..
ಬಸ್ಸು ಶನಿವಾರ ಮುಂಜಾನೆ ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ಪೆದ್ದಾ ಅಂಬರ್‌ಪೇಟೆಯ ತಿರುವಿನಲ್ಲಿ ಸಂಚರಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಬಲ ಬದಿಯ ತಡೆ ಬೇಲಿಗೆ ಢಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿದೆ. ಘಟನೆ ಸಂಭವಿಸಿದ ಕೂಡಲೇ ಪೊಲೀಸರು ಹಾಗೂ ಸ್ಥಳೀಯರು ತೆರಳಿ ಬಸ್ಸಿನಲ್ಲಿ ಸಿಲುಕಿದವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.


