bengaluru

ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!

Food Department conducts surprise raids on 64 PGs in Bengaluru!

ಬೆಂಗಳೂರು : ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳ ಬಳಿಕ ಈಗ ಪೇಯಿಂಗ್ ಗೆಸ್ಟ್ (PG) ವಸತಿ ಗೃಹಗಳ ಮೇಲೂ ಆಹಾರ ಸುರಕ್ಷತಾ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ಆಹಾರ ಇಲಾಖೆಯು ಬರೋಬ್ಬರಿ 64 ಪಿಜಿಗಳ ಮೇಲೆ ದಿಢೀರ್ ದಾಳಿ ನಡೆಸಿದೆ. 

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಜಿಬಿಎ (GBA) ವ್ಯಾಪ್ತಿಯ ವಿವಿಧ ಪಿಜಿಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ನಗರದ ಬರೋಬ್ಬರಿ 64 ಪಿಜಿಗಳಲ್ಲಿ ಈ ತಪಾಸಣೆ ನಡೆದಿದ್ದು, 23 ಪಿಜಿಗಳಿಂದ 12 ಆಹಾರ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. 

ಬೊಮ್ಮಸಂದ್ರದ ನಂದನ ಎಲೈಟ್ ಪಿಜಿಯಲ್ಲಂತೂ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಇಲ್ಲಿ ಕಳಪೆ ನೈರ್ಮಲ್ಯದ ಜೊತೆಗೆ ಊಟದ ಮೇಜಿನ ಮೇಲೆ ಗಲೀಜು ಕಂಡುಬಂದಿದೆ. ಅಚ್ಚರಿಯ ವಿಷಯವೆಂದರೆ, ಪಿಜಿಯ ಡೈನಿಂಗ್ ಟೇಬಲ್‌ನಲ್ಲಿ ತಿಗಣೆ ಔಷಧಿ ಕೂಡ ಪತ್ತೆಯಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ನೈರ್ಮಲ್ಯ ಉಲ್ಲಂಘನೆಯ ಆರೋಪದ ಮೇಲೆ ಈ ಪಿಜಿಯ ಊಟದ ಪ್ರದೇಶವನ್ನು ತಕ್ಷಣವೇ ಮುಚ್ಚಲು ಆದೇಶಿಸಲಾಗಿದೆ.

Comments (0)

Your email address will not be published. Required fields are marked *

Back to top button