#Exclusive NewsTop Newsಕ್ರೈಂ ಸ್ಟೋರಿಜಿಲ್ಲೆಧರ್ಮವಿಶೇಷವೆಬ್ ಸ್ಟೋರೀಸ್ಸುದ್ದಿ

ರಾಮ ಮಂದಿರ ಬಗ್ಗೆ ಅವಹೇಳನಕಾರಿ ಹೇಳಿಕೆ, ಮತಾಂತರಕ್ಕೆ ಒತ್ತಾಯಿಸಿದ್ದ ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಅರೆಸ್ಟ್​

ಹಿಂದೂ ಯುವತಿಗೆ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿದ್ದಲ್ಲದೆ, ಹಿಂದೂ ಧರ್ಮ ಮತ್ತು ರಾಮ ಮಂದಿರದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಡ್ಯಾನಿಷ್ ಖಾನ್​​ನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.


ಹಿಂದೂ ಧರ್ಮ, ರಾಮ ಮಂದಿರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೇ, ಇಸ್ಲಾಂಗೆ ಮತಾಂತರವಾಗುವಂತೆ ಸಹಪಾಠಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯಕೀಯ ವಿದ್ಯಾರ್ಥಿ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಡ್ಯಾನಿಷ್ ಖಾನ್ (27) ಕಿರುಕುಳ ನೀಡಿದ ಆರೋಪಿ. ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್ ಮಣಿಪಾಲ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವ್ಯಾಸಾಂಗ ಮಾಡುತ್ತಿದ್ದನು. ಈ ವೇಳೆ ತನ್ನ ಜೊತೆ ಓದುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿಯ ಜೊತೆ ಸ್ನೇಹ ಬೆಳಸಿದ್ದಾನೆ. ಇಬ್ಬರೂ ಹೊರ ರಾಜ್ಯದವರಾಗಿದ್ದು, ವಿದ್ಯಾಭ್ಯಾಸಕ್ಕಾಗಿ ಇಲ್ಲಿಗೆ ಬಂದಿದ್ದಾರೆ.

ಇಬ್ಬರ ನಡುವೆ ಸ್ನೇಹ ಬೆಳೆದ ನಂತರ, ಪರಸ್ಪರ ಫೋನ್ ನಂಬರ್ ಬದಲಾಯಿಸಿಕೊಂಡಿದ್ದಾರೆ. ಮುಂದೆ, ಗೆಳೆತನ ಪ್ರೀತಿಗೆ ತಿರುಗಿದೆ. ಇಬ್ಬರು ಪರಸ್ಪರ ಗಾಢವಾಗಿ ಪ್ರೀತಿಸಲು ಆರಂಭಿಸಿದ್ದಾರೆ. ನಂತರ, ಇದೇ ವರ್ಷ ಜನವರಿ 22 ರಂದು ರಾಮ ಮಂದಿರ ಉದ್ಘಾಟನೆ ವೇಳೆ ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್, ಪ್ರೇಯಸಿಯ ಎದುರು ಹಿಂದೂ ಧರ್ಮ ಹಾಗೂ ರಾಮ ಮಂದಿರದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

Comments (0)

Your email address will not be published. Required fields are marked *

Back to top button