Top Newsರಾಜಕೀಯರಾಜ್ಯಸಿನಿಮಾಸುದ್ದಿ

ಕಾಂತಾರ-2 ಶೂಟಿಂಗ್​​​ನಲ್ಲಿ ಅರಣ್ಯ ಭೂಮಿ ನಿಯಮ ಉಲ್ಲಂಘನೆಯಾಗಿಲ್ಲ: ಈಶ್ವರ್ ಖಂಡ್ರೆ

ಕಾಂತಾರಾ-2 ಸಿನಿಮಾ ಚಿತ್ರಿಕರಣದ ವೇಳೆ ಅರಣ್ಯ ಭೂಮಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಈ ಬಗ್ಗೆ ಸ್ವತಃ ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ.

ಕಾಂತಾರಾ-2 ಸಿನಿಮಾ ಶೂಟಿಂಗ್ ವೇಳೆ ಅರಣ್ಯ ಭೂಮಿ ನಿಯಮ ಉಲ್ಲಂಘನೆಯಾಗಿಲ್ಲ. ಚಿತ್ರಿಕರಣಕ್ಕೆ ನಿಯಮಾವಳಿ ಪ್ರಕಾರ ಅನುಮತಿ ನಿಡಲಾಗಿದೆ. ಅರಣ್ಯ ಭೂಮಿಯಲ್ಲಿ ಚಿತ್ರೀಕರಣ ಮಾಡಿಲ್ಲ. ಕಂದಾಯ ಜಮೀನಿನಲ್ಲಿ ಚಿತ್ರೀಕರಣ ಮಾಡಿದ್ಧಾರೆ ಎಂದು ಪ್ರಾಥಮಿಕ ವರದಿ ಬಂದಿದೆ ಎಂದರು

ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆ ಆಗಿಲ್ಲ ಎಂಬುದು ಪ್ರಾಥಮಿಕ ವರದಿ. ಆದರೂ ಸಂಪೂರ್ಣ ವರದಿ ಸಲ್ಲಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಾಧ್ಯಮಗಳಲ್ಲಿ ಬಂದ ವರದಿಯ ಅನ್ವಯ ಸೂಚನೆ ಕೊಟ್ಟಿದ್ದೇನೆ. ನಿಯಮಗಳ ಪ್ರಕಾರ ಅನುಮತಿ ಕೊಡಲಾಗಿತ್ತು. ಆದರೆ, ಅದು ಕಂದಾಯ ಭೂಮಿ, ಗೋಮಾಳ ಎನ್ನಲಾಗಿದೆ. ಅರಣ್ಯ ಭೂಮಿಯಲ್ಲಿ ಉಲ್ಲಂಘನೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Comments (0)

Your email address will not be published. Required fields are marked *

Back to top button