ಜಿಲ್ಲೆ

ಹನೂರು ಎನ್‌ಕೌಂಟರ್ ಪ್ರತಿಕಾರಕ್ಕೆ ಅರಣ್ಯವೇ ಬಲಿ!

The forest itself falls victim to retaliation for the Hanur encounter!

ಚಾಮರಾಜನಗರ : ಹನೂರಿನಲ್ಲಿ ನಡೆದ ಎನ್‌ಕೌಂಟರ್ ಬೆನ್ನಲ್ಲೇ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ದುಷ್ಕರ್ಮಿಗಳು ಅರಣ್ಯಕ್ಕೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಜಿಲೆಟಿನ್ ಬ್ಲಾಸ್ಟ್ ನಡೆದ ಬೆನ್ನಲ್ಲೇ ಈ ಕೃತ್ಯ ನಡೆದಿರುವುದು ಅರಣ್ಯ ಇಲಾಖೆ ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಕೊಳ್ಳೇಗಾಲ ತಾಲೂಕಿನ ಶಿಲುಬೆಪುರ ಹಾಗೂ ಜಾಗೇರಿ ಬಳಿ ಈ ಘಟನೆ ಸಂಭವಿಸಿದೆ. ದುಷ್ಕರ್ಮಿಗಳ ಕೃತ್ಯದಿಂದ ಮಲೆ ಮಹದೇಶ್ವರ ಬೆಟ್ಟದ ಸುಮಾರು 10 ಎಕರೆ ಪ್ರದೇಶದ ಅರಣ್ಯ ಸಂಪತ್ತು ಬೆಂಕಿಗೆ ಆಹುತಿಯಾಗಿದೆ. ಜಾಗೇರಿ ಬಳಿ ಇದ್ದ ಕಳ್ಳಬೇಟೆ ತಡೆ ಶಿಬಿರವನ್ನೂ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಟಾರ್ಗೆಟ್ ಮಾಡುವ ಉದ್ದೇಶದಿಂದಲೇ ಈ ಕೃತ್ಯ ಎಸೆಯಲಾಗಿದೆ ಎಂದು ಶಂಕಿಸಲಾಗಿದೆ. ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಹನೂರು ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಎನ್‌ಕೌಂಟರ್ ಪ್ರಕರಣದ ಬಳಿಕ, ಅರಣ್ಯ ಸಿಬ್ಬಂದಿಯನ್ನು ಬೆದರಿಸಲು ಈ ರೀತಿಯ ಕೃತ್ಯಗಳನ್ನು ಎಸಗಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಅರಣ್ಯ ಸಿಬ್ಬಂದಿ ವಿಡಿಯೋ ಬಿಡುಗಡೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.‌

Comments (0)

Your email address will not be published. Required fields are marked *

Back to top button