#Exclusive NewsTop Newsಜಿಲ್ಲೆರಾಜಕೀಯಸುದ್ದಿ

ಕೊಳ್ಳೇಗಾಲ ಮಾಜಿ ಶಾಸಕ ಎಸ್.ಜಯಣ್ಣ ಹೃದಯಾಘಾತದಿಂದ ಸಾವನಪ್ಪಿದ್ದಾರೆ

ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಬೆನ್ನಲ್ಲೇ ಕೊಳ್ಳೇಗಾಲ ಮಾಜಿ ಶಾಸಕ ಎಸ್ ಜಯಣ್ಣಇಂದು ನಿಧನರಾಗಿದ್ದಾರೆ. ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದ ಎಸ್ ಜಯಣ್ಣ ಅವರು ಹೃದಯಾಘಾತದಿಂದ ಮರಣ ಹೊಂದಿದ್ದಾರೆ.

1994 ರಲ್ಲಿ ಜನತಾದಳ ಹಾಗು 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ಕೊಳ್ಳೇಗಾಲ ಶಾಸಕರಾಗಿ ಆಯ್ಕೆಯಾಗಿದ್ದ ಎಸ್ ಜಯಣ್ಣ  ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಜಯಣ್ಣ ಅವರನ್ನು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.

ಮೈಸೂರಿಗೆ ಹೊರಡುವ  ವೇಳೆ ಹೃದಯಾಘಾತ ಸಂಭವಿಸಿದೆ

ನಾಳೆ ಗೃಹ ಪ್ರವೇಶ ಹಿನ್ನಲೆ ಆಹ್ವಾನ ಪತ್ರಿಕೆ ಕೊಡಲು ಮೈಸೂರಿಗೆ ತೆರಳುತ್ತಿದ್ದ ವೇಳೆ ಜಯಣ್ಣ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೊಳ್ಳೇಗಾಲ ತಾಲೂಕಿನ ಉತ್ತಂಬಳ್ಳಿ ಬಳಿ ಘಟನೆ ನಡೆದಿದೆ. ಜಯಣ್ಣ ಅವರಿಗೆ 72 ವರ್ಷ ವಯಸ್ಸಾಗಿತ್ತು.  2018ರಲ್ಲಿ ಟಿಕೆಟ್ ಕೊಟ್ಟಿರಲಿಲ್ಲ. ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದಿದೆ.

 

Comments (0)

Your email address will not be published. Required fields are marked *

Back to top button