ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ – ರಾಜಕೀಯ ಗಣ್ಯರಿಂದ ಸಂತಾಪ!
Former Minister B.C. Nagesh passes away – Condolences from political dignitaries!

ಬೆಂಗಳೂರು : ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಮಾಜಿ ಶಾಸಕ ಬಿ.ಸಿ. ನಾಗೇಶ್ (67) ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನಲ್ಲಿರುವ ತಮ್ಮ ಪುತ್ರಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ತಿಪಟೂರು ಕ್ಷೇತ್ರದಿಂದ 2008 ಮತ್ತು 2018 ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ನಾಗೇಶ್, ಬೊಮ್ಮಾಯಿ ಸಂಪುಟದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು ತಮ್ಮ ಆಡಳಿತಾವಧಿಯಲ್ಲಿ ಹಲವು ಪ್ರಮುಖ ಹಾಗೂ ದಿಟ್ಟ ನಿರ್ಧಾರಗಳನ್ನು ಕೈಗೊಂಡಿದ್ದರು.
ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಮಾಜಿ ಶಾಸಕ ಬಿ.ಸಿ. ನಾಗೇಶ್ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗಣ್ಯರು ಎಕ್ಸ್ ಖಾತೆ ಮೂಲಕ ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಅರವಿಂದ್ ಬೆಲ್ಲದ್, ಹರೀಶ್ ಪೂಂಜಾ ಸೇರಿದಂತೆ ಹಲವು ನಾಯಕರು ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ.




