#Exclusive NewsTop Newsಫ್ರೀಡಂ ಟಿವಿ ವಿಶೇಷಸುದ್ದಿ
BDCC ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ದಿಢೀರ್ ರಾಜೀನಾಮೆ!

ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(BDCC)ನ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ಇನ್ನೂ ಒಂದು ವರ್ಷಗಳ ಕಾಲ ಅಧಿಕಾರಾವಧಿ ಇರುವಾಗಲೇ ಶುಕ್ರವಾರ(ಅ4) ಬೆಳಗ್ಗೆ ದಿಢೀರ್ ರಾಜೀನಾಮೆ ನೀಡುವ ಮೂಲಕ ಮಹತ್ವದ ಬೆಳವಣಿಗೆಗೆ ಕಾರಣವಾಗಿದೆ.
ಬಿಡಿಸಿಸಿಯ 14 ಸದಸ್ಯರು ಗುರುವಾರವಷ್ಟೇ ಬೆಮುಲ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಸಿದ್ದರು. ಬಿಡಿಸಿಸಿ ಅಧ್ಯಕ್ಷ ರಮೇಶ ಕತ್ತಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ಅವಿಶ್ವಾಸ ಗೊತ್ತುವಳಿ ಮಂಡಿಸಲೂ ನಿರ್ಧರಿಸಿದ್ದರು ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ಬಿಡಿಸಿಸಿ ಕಾರ್ಯನಿರ್ವಾಹಕ ಅಧಿಕಾರಿಗೆ ರಾಜೀನಾಮೆ ಪತ್ರವನ್ನು ತಮ್ಮ ಆಪ್ತರ ಮೂಲಕ ಬ್ಯಾಂಕಿಗೆ ಕಳುಹಿಸಿರುವ ರಮೇಶ ಕತ್ತಿ, ನನ್ನ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನಗೆ ಸಹಕಾರ ನೀಡಿದ ಎಲ್ಲ ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೆನೆ ಎಂದು ಉಲ್ಲೇಖಿಸಿದ್ದಾರೆ.




